ಅಡ್ಯನಡ್ಕ: ಇಲ್ಲಿನ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಸಮಾರಂಭವು ಜೂ. 8ರಂದು ಕಾಲೇಜಿನ ವಾರಣಾಶಿ ಕೃಷ್ಣ ಸಭಾಭವನದಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿದ್ದ ಕನ್ನಡ ಸಂಘ ವಿಟ್ಲ ಇದರ ಅಧ್ಯಕ್ಷ ಹಾಗೂ ವಿಟ್ಲದ ವಿಠಲ ಪ.ಪೂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಂ. ಅನಂತಕೃಷ್ಣ ಹೆಬ್ಬಾರ್ ಮಾತನಾಡಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ಹೆಚ್ಚಿನ ಅಂಕ ಗಳಿಕೆಯು ಅನಿವಾರ್ಯ. ಹಾಗೆಯೇ ಜೀವನದಲ್ಲಿ ಯಶಸ್ವಿಯಾಗಬೇಕಾದರೆ ವಿವೇಕ ಹಾಗೂ ಆತ್ಮಗೌರವವನ್ನು ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆಯಿತ್ತರು.
ಜನತಾ ವಿದ್ಯಾಸಂಸ್ಥೆಗಳ ಸಂಚಾಲಕಿ ಡಾ. ಅಶ್ವಿನಿ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ರಮೇಶ ಎಂ. ಬಾಯಾರ್, ಪ್ರಾಂಶುಪಾಲರಾದ ಡಿ. ಶ್ರೀನಿವಾಸ್ ಶುಭ ಹಾರೈಸಿದರು. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ 22 ವಿದ್ಯಾರ್ಥಿಗಳು ಹಾಗೂ ಅವರ ಪೋಷಕರನ್ನು ಸನ್ಮಾನಿಸಲಾಯಿತು.
ಸನ್ಮಾನಿತರ ಪರವಾಗಿ ಸಂಕೇತ್ ಬಾಳಿಗ, ಕಾವ್ಯ ಸಾಗರ್, ಸುರಕ್ಷಾ ಮತ್ತು ಪೋಷಕರು ಅನಿಸಿಕೆ ಹಂಚಿಕೊಂಡರು. ಅರ್ಥಶಾಸ್ತ್ರ ಉಪನ್ಯಾಸಕಿ ವೀಣಾ ಟಿ. ಅವರು ಪ್ರಸ್ತಾವಿಸಿ, ಆಂಗ್ಲಭಾಷಾ ಉಪನ್ಯಾಸಕಿ ಜಯಶ್ರೀ ಕೆ. ಆರ್. ಪರಿಚಯಿಸಿದರು. ಭಾಗ್ಯಶ್ರೀ ಸ್ವಾಗತಿಸಿ, ಕೃಷ್ಣ ಶರ್ಮ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.