Tuesday, January 21, 2025
ಸುದ್ದಿ

ಜೂನ್ 11ರಂದು ಸವಣೂರು ಗ್ರಾಮ ಪಂಚಾಯತ್‍ನಲ್ಲಿ ಸ್ವಚ್ಚಮೇವ ಜಯತೇ, ಪರಿಸರ ದಿನಾಚರಣೆ – ಕಹಳೆ ನ್ಯೂಸ್

ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚಮೇವ ಜಯತೇ ಹಾಗೂ ವಿಶ್ವ ಪರಿಸರ ದಿನಾಚರಣೆ ಉದ್ಘಾಟನಾ ಕಾರ್ಯಕ್ರಮ ಜೂನ್ 11ರಂದು ಸವಣೂರಿನ ವಿನಾಯಕ ಸಭಾ ಭವನದಲ್ಲಿ ನಡೆಯಲಿದೆ. ಜೂನ್ 11 ರಿಂದ ಜುಲೈ 10ರವರೆಗೆ ಒಂದು ತಿಂಗಳ ಕಾಲ ಈ ಸ್ವಚ್ಛ ಮೇವ ಜಯತೇ ಹಾಗೂ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಲಿದ್ದು, ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೂಳ್ಳುವಂತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಬಟ್ಟೋಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು