Wednesday, January 22, 2025
ಸುದ್ದಿ

ಬೈಕಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವು – ಕಹಳೆ ನ್ಯೂಸ್

ಬೈಕಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳೂರಿನ ಹೊರವಲಯದ ಎಕ್ಕೂರು ಬಳಿ ಸಂಭವಿಸಿದೆ. ಮೃತ ಸವಾರನನ್ನು ಕುತ್ತಾರು ಮದನಿ ನಗರ ನಿವಾಸಿ ಸಿದ್ದೀಕ್ ಎಂದು ಗುರುತಿಸಲಾಗಿದೆ. ಸಿದ್ದೀಕ್ ಬೈಕಿನಲ್ಲಿ ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ ತೊಕ್ಕೊಟ್ಟು ಕಡೆಗೆ ಸಾಗುತ್ತಿದ್ದ ಲಾರಿಯೊಂದು ಎಕ್ಕೂರಿನ ಕೇಂದ್ರೀಯ ವಿದ್ಯಾಲಯದ ಬಳಿ ಇವರಿದ್ದ ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟರೆನ್ನಲಾಗಿದೆ. ಸ್ಥಳಕ್ಕೆ ದಕ್ಷಿಣ ಠಾಣೆಯ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು