Thursday, January 23, 2025
ಸುದ್ದಿ

ಬಂಗಾಳದಲ್ಲಿ ಬಾಂಬ್ ದಾಳಿಯಲ್ಲಿ ಒಂದು ಸಾವು, ಹಲವರಿಗೆ ಗಾಯ – ಕಹಳೆ ನ್ಯೂಸ್

ಪಶ್ಚಿಮ ಬಂಗಾಳದಲ್ಲಿ ಮತ್ತೆ ಸಂಘರ್ಷ ಮುಂದುವರೆದಿದ್ದು, ಇಂದು ನಡೆದ ಕಚ್ಛಾ ಬಾಂಬ್ ದಾಳಿಗೆ ಓರ್ವ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿಂದೆ ಲೋಕಸಭಾ ಚುನಾವಣೆ ವೇಳೆ ವ್ಯಾಪಕ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದ್ದ 24 ಪರಗಣ ಜಿಲ್ಲೆಯ ಕಂಕಿನಾರಾದಲ್ಲಿ ಮತ್ತೆ ಸಂಘರ್ಷ ಸಂಭವಿಸಿದ್ದು, ಇಲ್ಲಿನ ಬುರುಯ್ ಪಾರದಲ್ಲಿ ದುಷ್ಕರ್ಮಿಗಳು ಮನೆ ಮೇಲೆ ಎಸೆದ ಕಚ್ಛಾ ಬಾಂಬ್ ಎಸೆದಿದ್ದಾರೆ. ಮೃತ ವ್ಯಕ್ತಿಯನ್ನು 68 ವರ್ಷದ ಮಹಮದ್ ಮುಖ್ತಾರ್ ಎಂದು ಗುರುತಿಸಲಾಗಿದೆ. ಗಾಯಾಳುಗಳಲ್ಲಿ ಮುಖ್ತಾರ್ ಪತ್ನಿ ಕೂಡ ಸೇರಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೂಲಗಳ ಪ್ರಕಾರ ಮುಖ್ತಾರ್ ಮತ್ತು ಆತನ ನೆರೆ ಮನೆಯವರು ಮನೆಯಂಗಳದಲ್ಲಿ ಕುಳಿತು ಮಾತನಾಡುತ್ತಿದ್ದಾಗ ದುಷ್ಕರ್ಮಿಗಳು ಕಚ್ಚಾಬಾಂಬ್ ಎಸೆದು ಪರಾರಿಯಾಗಿದ್ದಾರೆ. ಪ್ರಸ್ತುತ ಘಟನಾ ಪ್ರದೇಶದಲ್ಲಿ ಪ್ರಕ್ಷುಬ್ದ ಪರಿಸ್ಥಿತಿ ನಿರ್ಮಾಣವಾಗಿದ್ದು ಮುಂಜಾಗ್ರತಾ ಕ್ರಮವಾಗಿ ವ್ಯಾಪಕ ಭದ್ರತೆ ನಿಯೋಜಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು