Tuesday, January 21, 2025
ಸುದ್ದಿ

ಬೆಂಗಳೂರು ದಕ್ಷಿಣ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ ರೋಹಿಣಿ : ಅಣ್ಣಾಮಲೈ ಅವರಿಂದ ಅಧಿಕಾರ ಹಸ್ತಾಂತರ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದ ಸಿಂಗಂ ಎಂದೇ ಹೆಸರಾಗಿದ್ದ ಡಿಸಿಪಿ, ಎಸ್‍ಪಿ ಕೆ.ಅಣ್ಣಾಮಲೈ ಅವರು ಇತ್ತೀಚೆಗೆ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಬೆಂಗಳೂರು ದಕ್ಷಿಣ ಡಿಸಿಪಿ ಸ್ಥಾನಕ್ಕೆ ರೋಹಿಣಿ ಕಟೋಚ್ ಸೆಪಟ್ ನೇಮಕಗೊಂಡಿದ್ದಾರೆ.
ಇನ್ನು ಬೆಂಗಳೂರಿನ ಕಚೇರಿಯಲ್ಲಿ ಕೆ.ಅಣ್ಣಾಮಲೈ ಅವರಿಂದ ರೋಹಿಣಿ ಕಟೋಚ್ ಸೆಪಟ್ ಅಧಿಕಾರ ಸ್ವೀಕರಿಸಿದರು. ಅಣ್ಣಾಮಲೈ ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು.

ಅಣ್ಣಾಮಲೈ ಅವರು ರಾಜೀನಾಮೆ ನೀಡಿದ ಹಿನ್ನೆಲೆ ರೋಹಿಣಿ ಕಟೋಚ್ ಸೆಪಟ್‍ರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಇವರು ಕೂಡ ದಕ್ಷ ಪೊಲೀಸ್ ಅಧಿಕಾರಿ ಎಂದು ಹೆಸರು ಪಡೆದಿದ್ದಾರೆ. ರೋಹಿಣಿ ಕಟೋಚ್ ಸೆಪಟ್ ಅವರು ಈ ಹಿಂದೆ ಕೂಡ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಇವರು ಕೋಲಾರದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಧಿಕಾರ ಹಸ್ತಾಂತರದ ಬಳಿಕ ಅಣ್ಣಾಮಲೈ ಅವರೊಂದಿಗೆ ಸಿಬ್ಬಂದಿ ಸೆಲ್ಫಿ ತೆಗೆದುಕೊಂಡು ಸಂತಸಪಟ್ಟರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು