ಭಾರತ ಕ್ರಿಕೆಟ್ ತಂಡ ಮತ್ತು ಅಭಿಮಾನಿಗಳಿಗೆ ಭಾರೀ ಆಘಾತ ಎನ್ನುವಂತೆ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಅವರು ಗಾಯಾಳಾಗಿ ತಂಡದಿಂದ ಹೊರ ಬಿದ್ದಿದ್ದಾರೆ.
ಭಾನುವಾರ ಆಸ್ಟ್ರೇಲಿಯಾ ತಂಡದ ವಿರುದ್ಧ ನಡೆದ ಪಂದ್ಯದ ವೇಳೆ ಧವನ್ ಗಾಯಗೊಂಡಿದ್ದರು. ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದ ಅವರು 117 ರನ್‍ಗಳಿಸಿ ಗೆಲುವಿನಲ್ಲಿ ಮಹತ್ವದ ಕೊಡುಗೆ ಸಲ್ಲಿಸಿದ್ದರು. ಧವನ್ ಅವರ ಹೆಬ್ಬೆರಳಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ಮೂವರು ವಾರಗಳ ವಿಶ್ರಾಂತಿ ಅಗತ್ಯವಿರುವ ಹಿನ್ನಲೆಯಲ್ಲಿ ಆಡುವ ಬಳಗದಿಂದ ಕೈ ಬಿಡಬೇಕಾಗಿದೆ.
ಧವನ್ ಬದಲಿಗೆ ಕೆ.ಎಲ್.ರಾಹುಲ್ ಅವರು ರೋಹಿತ್ ಶರ್ಮಾ ಅವರೊಂದಿಗೆ ಆರಂಭಿನಾಗಿ ಆಡುವ ಸಾಧ್ಯತೆಗಳಿವೆ. ದಿನೇಶ್ ಕಾರ್ತಿಕ್ ಅಥವಾ ವಿಜಯ್ ಶಂಕರ್ ಅವರು ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದಾರೆ.
ಧವನ್ ಅವರ ಜಾಗಕ್ಕೆ ಶ್ರೇಯಸ್ ಅಯ್ಯರ್ ಇಲ್ಲ ರಿಷಭ್ ಪಂತ್ ಅವರನ್ನು ಸೇರಿಸಿಕೊಳ್ಳುವ ಸಾಧ್ಯತೆಗಳಿವೆ.