Monday, January 20, 2025
ಸುದ್ದಿ

ಐಎಂಎ ಜುವೆಲರ‍್ಸ್ ವಂಚನೆ ಪ್ರಕರಣ ಸಿಸಿಬಿ ತನಿಖೆಗೆ: ಸಿಎಂ – ಕಹಳೆ ನ್ಯೂಸ್

ಅಧಿಕ ಬಡ್ಡಿ ಆಸೆ ತೋರಿಸಿ ಸಾರ್ವಜನಿಕರಿಂದ ಕೋಟ್ಯಂತರ ರೂ. ಹೂಡಿಕೆ ಮಾಡಿಸಿಕೊಂಡ ಐಎಂಎ ಜುವೆಲರ‍್ಸ್ ಮಾಲಕ ಮನ್ಸೂರ್ ಖಾನ್ ನಾಪತ್ತೆಯಾಗಿರುವ ಪ್ರಕರಣವನ್ನು ಸರ್ಕಾರ ಸಿಸಿಬಿ ತನಿಖೆಗೆ ನೀಡಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ ಸಿಸಿಬಿ ತನಿಖೆ ನೀಡಿರುವ ಬಗ್ಗೆ ತಿಳಿಸಿದ್ದಾರೆ. ಐಎಂಎ ಜುವೆಲರ‍್ಸ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಹೂಡಿಕೆದಾರರ ಆತಂಕವನ್ನು ಸರ್ಕಾರ ಅರ್ಥ ಮಾಡಿಕೊಂಡಿದ್ದು ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಗೃಹ ಸಚಿವರಾದ ಎಂ.ಬಿ.ಪಾಟೀಲ್ ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದು ಪ್ರಕರಣವನ್ನು ಶೀಘ್ರ ಇತ್ಯರ್ಥಗೊಳಿಸಲು ಸೂಚಿಸಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈಗಾಗಲೆ ನಿಗೂಢವಾಗಿ ನಾಪತ್ತೆಯಾಗಿರುವ ಮನ್ಸೂರ್ ಖಾನ್ ಪತ್ತೆಗಾಗಿ ಪೊಲೀಸರ ನಾಲ್ಕು ತಂಡಗಳನ್ನು ರಚಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು