Monday, January 20, 2025
ಸುದ್ದಿ

ಚಂಡಮಾರುತ : 2 ದಿನ ಕರಾವಳಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ- ಕಹಳೆ ನ್ಯೂಸ್

ನವದೆಹಲಿ:   ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತದ ಸ್ವರೂಪ ಪಡೆದುಕೊಂಡಿದೆ. ಇದಕ್ಕೆ ‘ವಾಯು’ ಎಂದು ನಾಮಕರಣ ಮಾಡಲಾಗಿದ್ದು, ಗುರುವಾರ ಬೆಳಗ್ಗೆ ಗುಜರಾತ್‌ ಕರಾವಳಿಯನ್ನು ಅಪ್ಪಳಿಸುವ ಸಾಧ್ಯತೆ ಇದೆ.

ಗುಜರಾತಿನ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ಸಾರಲಾಗಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರವುಗೊಳಿಸಲು ಸರ್ಕಾರ ಮುಂದಾಗಿದೆ. ಅಲ್ಲದೇ ಕೇಂದ್ರದಿಂದ ಅಗತ್ಯ ನೆರವು ನೀಡಲಾಗುತ್ತಿದ್ದು, ರಕ್ಷಣಾ ತಂಡಗಳು ಸಕಲ ಉಪಕರಣಗಳೊಂದಿಗೆ ಆಗಮಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಭಾರೀ ಪ್ರಮಾಣದಲ್ಲಿ ಚಂಡಮಾರುತ ಅಪ್ಪಳಿಸುವ  ಮುನ್ನೆಚ್ಚರಿಕಾ ಕ್ರಮವಾಗಿ 2 ದಿನ ಬುಧವಾರ ಹಾಗೂ ಗುರುವಾರ ಕರಾವಳಿ ಜಿಲ್ಲೆಗಳಲ್ಲಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಚಂಡಮಾರುತ ಪ್ರಭಾವದಿಂದ  ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಇನ್ನೂ  3 ದಿನ ಭಾರೀ ಮಳೆ ಗಾಳಿ ಬೀಸಲಿದೆ. ಆದರೆ ಕೊಡಗು ಜಿಲ್ಲೆಗೆ ಇದರಿಂದ ಹೆಚ್ಚಿನ ಪರಿಣಾಮ ಉಂಟಾಗುವುದಿಲ್ಲ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.