ಕರ್ನಾಟಕದಲ್ಲಿ 1,117 ಕಿ.ಮೀ. ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಈ ಎಲ್ಲಾ ರಸ್ತೆಗಳನ್ನು ಬಳಸುವ ವಾಹನ ಸವಾರರು ಟೋಲ್ ಶುಲ್ಕವನ್ನು ಪಾವತಿ ಮಾಡಬೇಕಿದೆ. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.
‘2011ರಲ್ಲಿ ಪ್ರಕಟಗೊಂಡ ಆದೇಶದ ಪ್ರಕಾರ ರಾಜ್ಯ ಹೆದ್ದಾರಿಗಳಲ್ಲಿ ಬಳಕೆದಾರರ ಶುಲ್ಕ ವಿಧಿಸುವುದನ್ನು ಮುಂದುವರೆಸಲು ತೀರ್ಮಾನಿಸಲಾಗಿದೆ’ ಎಂದು ಹೇಳಿದರು. ರಾಜ್ಯ ಹೆದ್ದಾರಿ ಪ್ರಾಧಿಕಾರ, ಕೆ-ಶಿಪ್ ಮತ್ತು ರಸ್ತೆ ಅಭಿವೃದ್ಧಿ ನಿಗಮದಿಂದ 25,800 ಕೋಟಿ ವೆಚ್ಚದಲ್ಲಿ 1,117 ಕಿ.ಮೀ. ರಸ್ತೆಯನ್ನು ನಿರ್ಮಾಣ ಮಾಡಲಾಗುತ್ತದೆ. ರಾಜ್ಯದ ಮುಂದಿನ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ.
17 ರಾಜ್ಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹಕ್ಕೆ ಸರ್ಕಾರದ ಒಪ್ಪಿಗೆ ರಾಜ್ಯದಲ್ಲಿ 37 ಸಾವಿರ ಕೋಟಿ ರೂ. ವೆಚ್ಚದಲ್ಲಿ 3600 ಕಿ.ಮೀ. ರಸ್ತೆ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ನೀಡಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿ ಆರಂಭವಾಗಿದೆ’ ಎಂದು ಎಚ್.ಡಿ.ರೇವಣ್ಣ ತಿಳಿಸಿದರು.