Wednesday, January 22, 2025
ಸುದ್ದಿ

ಇರಾ ಗ್ರಾಮ ಪಂಚಾಯತ್‍ನಲ್ಲಿ ಸ್ವಚ್ಛ ಮೇವ ಜಯತೇ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್, ತಾಲೂಕು ಪಂಚಾಯತ್ ಬಂಟ್ವಾಳ ಹಾಗು ಇರಾ ಗ್ರಾಮ ಪಂಚಾಯತ್‍ಗಳ ಜಂಟಿ ಆಶ್ರಯದಲ್ಲಿ ಸ್ವಚ್ಛ ಮೇವ ಜಯತೆ ಕಾರ್ಯಕ್ರಮವು ಇರಾ ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ಕೊಳ್ನಾಡು ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್.ಮೊಹಮ್ಮದ್, ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷ ರಾಮ ಕೆ., ಉಪ ತಹಶಿಲ್ದಾರ್ ರವಿಶಂಕರ್, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುಧಾಕರ್ ಕೆ.ಟಿ, ತುಳಸಿ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರು, ಕಂದಾಯ ಹಾಗು ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ, ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಳಿನಿ ಎ.ಕೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು