Recent Posts

Monday, January 27, 2025
ಸುದ್ದಿ

ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಅಶ್ಲೀಲವಾಗಿ ನಿಂದಿಸಿದ್ದ ಮಾಜಿ ಸಚಿವ ರಮಾನಾಥ ರೈ – ಕಹಳೆ ನ್ಯೂಸ್

ಮಂಗಳೂರು: ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಅಶ್ಲೀಲವಾಗಿ ನಿಂದಿಸಿದ್ದ ಮಾಜಿ ಸಚಿವ ರಮಾನಾಥ ರೈ ವಿರುದ್ಧ ಪ್ರಕರಣ ದಾಖಲಿಸಲು ಕೋರ್ಟ್ ಸೂಚಿಸಿದೆ. ಅಸೈಗೊಳಿಯಲ್ಲಿ ನಡೆದಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಚಿವರಾಗಿದ್ದ ರಮಾನಾಥ ರೈ ಅವರು, ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅವಾಚ್ಯವಾಗಿ ನಿಂದಿಸಿದ್ದರೆನ್ನಲಾಗಿದೆ.

ರಮಾನಾಥ ರೈ ಅವರ ವಿರುದ್ಧ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ದೂರು ನೀಡಿದ್ದು, 2017 ರ ಸೆಪ್ಟಂಬರ್ ನಲ್ಲಿ ದೂರು ನೀಡಲಾಗಿತ್ತು. ಮಂಗಳೂರು ಎರಡನೇ ಜೆ.ಎಂ.ಎಫ್.ಸಿ. ಕೋರ್ಟ್ ನಿರ್ದೇಶನದ ಮೇರೆಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ರಮಾನಾಥ ರೈ ಅವರ ವಿರುದ್ಧ ಐಪಿಸಿ ಸೆಕ್ಷನ್ 500, 504 ರ ಅಡಿ ಮಾನಹಾನಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು