Monday, November 25, 2024
ಸುದ್ದಿ

ಯೋಗ ಜೀವನದ ಅವಿಭಾಜ್ಯ ಅಂಗವಾಗಲಿ ಗೃಹರಕ್ಷಕರ ಕಚೇರಿಯಲ್ಲಿ ಯೋಗ ಗುರು ಗೋಪಾಲ ಕೃಷ್ಣ ದೇಲಪಾಂಡಿ ಅಭಿಮತ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾಡಳಿತ ಇಲಾಖೆ ಹಾಗೂ ಜಿಲ್ಲಾ ಗೃಹರಕ್ಷಕದಳ ಇದರ ಸಹಯೋಗದಲ್ಲಿ ಜೂನ್ 21ರಂದು ಆಚರಿಸುವ ಅಂತರರಾಷ್ಟ್ರಿ ಯೋಗ ದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರಿಗೆ ದಿನಾಂಕ ಗುರುವಾರ ಬೆಳಿಗ್ಗೆ 7:00 ಗಂಟೆಗೆ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಖ್ಯಾತ ಯೋಗ ಗುರು ಯೋಗ ರತ್ನ ಗೋಪಾಲ ಕೃಷ್ಣ ದೇಲಪಾಂಡಿ ಇವರ ಮಾರ್ಗದರ್ಶನದಲ್ಲಿ ತರಬೇತಿ ಶಿಬಿರ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಯೋಗ ಮನುಷ್ಯನ ಆರೋಗ್ಯಕ್ಕೆ ಅತೀ ಅವಶ್ಯಕ ದೈಹಿಕ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಯೋಗವನ್ನು ಪ್ರತಿಯೊಬ್ಬರು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶ್ರೀ ಗೋಪಾಲ ಕೃಷ್ಣ ದೇಲಪಾಂಡಿ ಅವರು ಕರೆ ನೀಡಿದರು ದಿನದ 8 ಗಂಟೆಗಳ ಕಾಲ ನಿಂತುಕೊಂಡು ಒತ್ತಡದ ಕೆಲಸ ಮಾಡುವ ಗೃಹರಕ್ಷಕರಿಗೆ ಯೋಗ ಅತ್ಯಂತ ಅನಿವಾರ್ಯ ಎಂದು ನುಡಿದರು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಠರಾದ ಡಾ.ಮುರಳಿ ಮೋಹನ್ ಚೂಂತಾರುರವರ ನೇತೃತ್ವದಲ್ಲಿ ಈ ಶಿಬಿರ ನಡೆಯಿತು ಸಮಾರು 25 ಮಂದಿ ಗೃಹರಕ್ಷಕರು ಈ ಶಿಬಿರದಲ್ಲಿ ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು