Tuesday, November 26, 2024
ಸುದ್ದಿ

ಎಟಿಎಂಯನ್ನು ಗೋಡೆಗೆ ಅಳವಡಿಸುವಂತೆ ಬ್ಯಾಂಕುಗಳಿಗೆ ಸೂಚನೆ ನೀಡಿದ ಆರ್.ಬಿ.ಐ – ಕಹಳೆ ನ್ಯೂಸ್

ಎಟಿಎಂಗಳ ನಿರ್ವಹಣೆ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಬ್ಯಾಂಕುಗಳು ಎಟಿಎಂ ಕೇಂದ್ರಗಳನ್ನು ಬಂದ್ ಮಾಡುತ್ತಿರುವ ಕಾರಣ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಎಟಿಎಂಗಳ ಸುರಕ್ಷತೆಗೆ ಹೊಸ ಆದೇಶವನ್ನು ಹೊರಡಿಸಿದೆ.

ಎಟಿಎಂ ಯಂತ್ರಗಳನ್ನು ಗೋಡೆಗೆ ಅಳವಡಿಸುವಂತೆ ಬ್ಯಾಂಕುಗಳಿಗೆ ಸೂಚಿಸಿದ್ದು, ಇದಕ್ಕೆ ಸೆಪ್ಟಂಬರ್ ವರೆಗೆ ಕಾಲಾವಕಾಶ ನೀಡಲಾಗಿದೆ. ಅಲ್ಲದೆ ಅಧಿಕ ಸಂಖ್ಯೆಯಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ ಜೊತೆಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡುವಂತೆ ಸೂಚನೆ ನೀಡಿದೆ. ಬಿಗಿ ಭದ್ರತೆ ಇರುವ ವಿಮಾನ ನಿಲ್ದಾಣಗಳಲ್ಲಿ ಇದಕ್ಕೆ ವಿನಾಯಿತಿ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೆಲ ದಿನಗಳ ಹಿಂದಷ್ಟೇ ಎಟಿಎಂಗಳಲ್ಲಿ ಹಣ ಖಾಲಿಯಾದ ವೇಳೆ 3 ಗಂಟೆಯೊಳಗಾಗಿ ಹಣ ತುಂಬಿಸುವಂತೆ ಸೂಚನೆ ನೀಡಿದ್ದ ಬ್ಯಾಂಕ್ ಆಫ್ ಇಂಡಿಯಾ, ಇದರಲ್ಲಿ ವಿಫಲರಾದರೆ ಬ್ಯಾಂಕುಗಳಿಗೆ ದಂಡ ವಿಧಿಸುವುದಾಗಿ ಹೇಳಿದೆ. ಇದೀಗ ಎಟಿಎಂ ಸುರಕ್ಷತೆ ಕುರಿತು ಮತ್ತೊಂದು ಸೂಚನೆಯನ್ನು ಹೊರಡಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು