Monday, January 20, 2025
ಸುದ್ದಿ

ದೇಶವ್ಯಾಪಿ ವೈದ್ಯರ ಮುಷ್ಕರದಿಂದ ರೋಗಿಗಳಿಗೆ ಪರದಾಟ – ಕಹಳೆ ನ್ಯೂಸ್

ಬೆಂಗಳೂರು: ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಸ್ಥೆ ಕರೆ ನೀಡಿರುವ ದೇಶವ್ಯಾಪಿ ಮುಷ್ಕರದ ಕರೆಗೆ ಬೆಂಗಳೂರು, ಗದಗ, ಹುಬ್ಬಳ್ಳಿ, ಹಾಸನ ಸೇರಿದಂತೆ ರಾಜ್ಯದ ಹಲವೆಡೆ ವೈದ್ಯರು ಮುಷ್ಕರದಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ರೋಗಿಗಳು ಪರದಾಡುವಂತಾಗಿದೆ.

ಬೆಂಗಳೂರಿನ ನಿಮ್ಹಾನ್ಸ್ ಹಾಗೂ ಕಿಮ್ಸ್ ಆಸ್ಪತ್ರೆಯ ವೈದ್ಯರು ಸೇವೆಗೆ ಗೈರು ಹಾಜರಾಗಿದ್ದರಿಂದ ರೋಗಿಗಳು ಪರದಾಡುವಂತಾಗಿದೆ. ದೂರದ ಊರಿನಿಂದ ಬಂದ ರೋಗಿಗಳು ವೈದ್ಯರ ಪ್ರತಿಭಟನೆಯಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪಶ್ಚಿಮಬಂಗಾಳದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಐಎಂಎ ಸೋಮವಾರ ದೇಶಾದ್ಯಂತ ತುರ್ತು ಸೇವೆಯನ್ನು ಹೊರತುಪಡಿಸಿ ಒಪಿಡಿ ಸೇರಿದಂತೆ ಎಲ್ಲಾ ಪ್ರಮುಖ ಸೇವೆಯನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುವಂತೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ವೈದ್ಯರು ಮುಷ್ಕರಕ್ಕೆ ಬೆಂಬಲ ಘೋಷಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು