ದೆಹಲಿ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ದೆಹಲಿ ಭೇಟಿಯ ಸಂದರ್ಭದಲ್ಲಿ ಕೇಂದ್ರ ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ ಜೋಶಿ ಅವರನ್ನು ಭೇಟಿ ಮಾಡಿದ್ದಾರೆ. ರಾಜ್ಯದ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಕೊರತೆ ಆಗದಂತೆ ಅಗತ್ಯವಿರುವ ಕಲ್ಲಿದ್ದಲು ಪೂರೈಕೆ ಮಾಡಬೇಕೆಂದು ಭೇಟಿಯಾದ ಸಂದರ್ಭದಲ್ಲಿ ಸಿಎಂ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಬಳ್ಳಾರಿ, ಯರಮರಸ್, ರಾಯಚೂರು ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ದಾಸ್ತಾನು ಕಡಿಮೆಯಾಗಿದ್ದು, ಸಾಕಷ್ಟು ಕಲ್ಲಿದ್ದಲು ಪೂರೈಕೆ ಮಾಡಬೇಕೆಂದು ಸಿಎಂ ಮನವಿ ಮಾಡಿದ್ದಾರೆ.
ಇದಕ್ಕೆ ಸ್ಪಂದಿಸಿದ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಸಾಕಷ್ಟು ಕಲ್ಲಿದ್ದಲು ಪೂರೈಕೆ ಮಾಡಲಾಗುವುದು. ಬೇಡಿಕೆಯನ್ನು ಆದ್ಯತೆಯ ಮೇರೆಗೆ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ರಾಜ್ಯದ ಸ್ಥಾವರಗಳಿಗೆ ಕಲ್ಲಿದ್ದಲಿನ ಕೊರತೆಯಾಗದಂತೆ ಕಲ್ಲಿದ್ದಲು ಪೂರೈಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜೋಶಿ ಹೇಳಿದ್ದಾರೆ.