Monday, January 20, 2025
ಸಿನಿಮಾಸುದ್ದಿ

ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾದ ಸಿನಿಮಾ ನಿರ್ದೇಶಕ ಮಣಿರತ್ನಂ – ಕಹಳೆ ನ್ಯೂಸ್

ಚೆನ್ನೈ : ಖ್ಯಾತ ಸಿನಿಮಾ ನಿರ್ದೇಶಕ ಮಣಿರತ್ನಂ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮುಂಬೈನಲ್ಲಿ ಚಿತ್ರೀಕರಣದಲ್ಲಿದ್ದ ಮಣಿರತ್ನಂ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಇದೀಗ ಅವರನ್ನು ಚೆನ್ನೈಗೆ ಕರೆತಂದಿದ್ದು, ಚೆನ್ನೈನ ಅಪೋಲೋ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕನ್ನಡ, ಹಿಂದಿ, ತಮಿಳು ಭಾಷೆಗಳಲ್ಲಿ ಹಲವು ಹಿಟ್ ಸಿನಿಮಾಗಳನ್ನು ನೀಡಿರುವ ಮಣಿರತ್ನಂ ಇದೀಗ ಹೊಸ ಸಿನಿಮಾದಲ್ಲಿ ಬ್ಯುಸಿಯಾಗಿದ್ದ ವೇಳೆ ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು