Tuesday, January 21, 2025
ಸುದ್ದಿ

ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸ್ಥಾಪನೆಗೆ ಮುಂದಾದ ರಾಮಚಂದ್ರಾಪುರ ಮಠ – ಕಹಳೆ ನ್ಯೂಸ್

ವಿಷ್ಣುಗುಪ್ತ ಹೆಸರಿನ ವಿಶ್ವವಿದ್ಯಾಪೀಠದ ಮಹಾಸಂಕಲ್ಪದ ಸಾಕಾರಕ್ಕಾಗಿ ರಾಘವೇಶ್ವರ ಶ್ರೀಗಳು ಜೂನ್ ತಿಂಗಳ 20ರಿಂದ ಸಮಗ್ರ ರಾಮಾಯಣ ಪ್ರವಚನ ಆರಂಭಿಸಲಿದ್ದಾರೆ. ರಾಘವೇಶ್ವರ ಸ್ವಾಮಿಗಳು ಪೀಠಾರೋಹಣ ಮಾಡಿ 25 ವಸಂತಗಳು ತುಂಬಿದ್ದು, ಸುವರ್ಣಯುಗ ಆರಂಭದ ನೆನಪಿಗಾಗಿ ಈ ವಿಶಿಷ್ಟ ಕೊಡುಗೆಯನ್ನು ರಾಮಚಂದ್ರಾಪುರ ಮಠ ಸಮಾಜಕ್ಕೆ ನೀಡುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದೇಸಿ ಗೋವಂಶ ರಕ್ಷಣೆಗಾಗಿ ಕಳೆದ ವರ್ಷ ವಿಶ್ವದ ಏಕೈಕ ಗೋಸ್ವರ್ಗವನ್ನು ಸಮಾಜಕ್ಕೆ ನೀಡಿದ್ದ ಶ್ರೀಮಠ ಇದೀಗ ಆದಿಗುರು ಶಂಕರಾಚಾರ್ಯರಿಗೆ ಕಿರುಗಾಣಿಕೆಯಾಗಿ ದೇಸಿ ವಿದ್ಯೆಗಳ ಪುನರುತ್ಥಾನಕ್ಕೆ ಮುಡಿಪಾಗಿರುವ ವಿಶ್ವವಿದ್ಯಾಪೀಠವನ್ನು ಸಮರ್ಪಿಸುತ್ತಿದೆ. “ಬಾಳದಾರಿಗೆ ರಾಮದೀವಿಗೆ” ಎಂಬ ಘೋಷವಾಕ್ಯದೊಂದಿಗೆ ಬೆಂಗಳೂರು ಗಿರಿನಗರದಲ್ಲಿರುವ ರಾಮಾಶ್ರಮದಲ್ಲಿ ಪ್ರತಿದಿನ ಸಂಜೆ 6.45ರಿಂದ 8.15ರವರೆಗೆ ಆರು ತಿಂಗಳ ಕಾಲ ಎಡೆಬಿಡದೇ ಸಮಗ್ರ ರಾಮಾಯಣ ಪ್ರವಚನ ಶ್ರೀಗಳಿಂದ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನಲ್ಲಿ ರಾಘವೇಶ್ವರ ಶ್ರೀಗಳ “ರಾಮಾಯಣ ಚಾತುರ್ಮಾಸ್ಯ” ಧಾರಾ ರಾಮಾಯಣದ ಮೂಲಕ ಇಡೀ ಸಮಾಜದಲ್ಲಿ ಧರ್ಮಜಾಗೃತಿ ಹಾಗೂ ದೇಶದ ಸಂಸ್ಕೃತಿ ಪುನರುತ್ಥಾನಕ್ಕೆ ನಾಂದಿ ಹಾಡುವ ವಿಶ್ವವಿದ್ಯಾಪೀಠವೊಂದರ ಸ್ಥಾಪನೆಯ ಅಗತ್ಯತೆ ಮತ್ತು ಅನಿವಾರ್ಯತೆ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವ ಸಂಕಲ್ಪ ಶ್ರೀಗಳದ್ದು.

ಭರತಖಂಡದ ಸುವರ್ಣಯುಗದ ಕುರುಹಾಗಿ ಉಳಿದಿರುವ ತಕ್ಷಶಿಲಾ ವಿಶ್ವವಿದ್ಯಾನಿಲಯದ ಪುನರವತರಣ ಮತ್ತು ಧರ್ಮಯೋಧರ ಸೃಷ್ಟಿ ಈ ಯೋಜಿತ ವಿಶ್ವವಿದ್ಯಾಪೀಠದ ಮೂಲಧ್ಯೇಯವಾಗಿದೆ. ನಮ್ಮ ಪೂರ್ವಜರು ಕಂಡುಕೊಂಡ ಒಂದೊಂದು ವಿದ್ಯೆಯೂ ಪಾಶ್ಚಿಮಾತ್ಯ ದಾಳಿಯ ಪ್ರಭಾವಕ್ಕೆ ಸಿಲುಕಿ ರೂಪುಗೆಟ್ಟಿದೆ ಅಥವಾ ಅರ್ಥ ಕಳೆದುಕೊಂಡಿದೆ. ಉಳಿದವು ಅಳಿವಿನ ಅಂಚಿನಲ್ಲಿವೆ. ಅಳಿದುಳಿದ ವಿದ್ಯೆಗಳ ಪುನರುಜ್ಜೀವನ ಉದ್ದೇಶಿತ ವಿಶ್ವವಿದ್ಯಾಪೀಠದ ಉದ್ದೇಶ ಎಂದು ರಾಮಚಂದ್ರಾಪುರ ಮಠ ಹೇಳಿದೆ.