Recent Posts

Tuesday, January 21, 2025
ರಾಜಕೀಯ

ಕರಾವಳಿ ಭಾಗದ ಬಡಜನರ ಮೂಲಕಸುಬಾದ ಬೀಡಿ ಉದ್ಯಮಕ್ಕೆ ಯಾವುದೇ ತೆರಿಗೆ ವಿಧಿಸದಂತೆ ಕೋರಿ ಕೇಂದ್ರದ ಸಚಿವ ಡಿ.ವಿ ಎಸ್ ಗೆ ಅಶೋಕ್ ಕುಮಾರ್ ರೈ ಮನವಿ – ಕಹಳೆ ನ್ಯೂಸ್

ಕರಾವಳಿ ಭಾಗದ ಬಡಜನರ ಮೂಲಕಸುಬಾದ ಬೀಡಿ ಉದ್ಯಮಕ್ಕೆ ಯಾವುದೇ ರೀತಿಯ ತೆರಿಗೆ ವಿಧಿಸದಂತೆ ಕೋರಿ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿ.ವಿ ಸದಾನಂದ ಗೌಡರಿಗೆ ಯೂನಿಯನ್ ಪದಾಧಿಕಾರಿಗಳು ಮನವಿ ಸಲ್ಲಿಸಿದರು.ಮನವಿ ಸ್ವೀಕರಿಸಿ ಮಾತನಾಡಿದ ಡಿ.ವಿ ಸದಾನಂದ ಗೌಡರು ಈ ಬಗ್ಗೆ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಬಳಿ ಮಾತನಾಡಲಾಗಿದ್ದು ನಾಳೆ ಈ ಸಂಬಂಧ ನಿರ್ಮಲಾ ಸೀತಾರಾಮನ್ ರವರು ಸಭೆ ಕರೆದಿರುವುದಾಗಿ ತಿಳಿಸಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಂದಿನ ಬಜೆಟ್ ನಲ್ಲಿ ಬೀಡಿ ಉದ್ಯಮಕ್ಕೆ ತೆರಿಗೆಯಿಂದ ವಿನಾಯಿತಿ ಮತ್ತು ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ಭರವಸೆಯನ್ನು ಡಿ.ವಿ ಸದಾನಂದ ಗೌಡರು ನೀಡಿರುತ್ತಾರೆ. ಈ ಸಂದರ್ಭದಲ್ಲಿ ಉದ್ಯಮಿ,ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಪ್ರವರ್ತಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಯೂನಿಯನ್ ನ ಮುರಳೀಧರ ಶೆಟ್ಟಿ, ಜಲೀಲ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು