Monday, January 20, 2025
ಸುದ್ದಿ

ಕಡಬ ಸರಣಿ ಅಪಘಾತ ಮೂವರು ಗಂಭೀರ, ಆರು ಮಂದಿಗೆ ಗಾಯ – ಕಹಳೆ ನ್ಯೂಸ್

ಕಡಬ: ಲಾರಿ, ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿ ಆರು ಮಂದಿ ಗಾಯಗೊಂಡ ಘಟನೆ ಕಡಬದ ಹಳೇಸ್ಟೇಷನ್ ಸಮೀಪದ ತಿರುವಿನಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಡಬದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ವಿರುದ್ಧ ದಿಕ್ಕಿನಿಂದ ಸಾಗುತ್ತಿದ್ದ ಮಹೀಂದ್ರಾ ಮರಾಝ್ಝೋ ಕಾರು, ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಗಂಭೀರ ಗಾಯಗೊಂಡಿದ್ದು, ದ್ವಿಚಕ್ರ ವಾಹನ ಸವಾರರೂ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡ ಗಾಯಾಳುಗಳನ್ನು ಬಳ್ಳಾರಿ ಮೂಲದವರೆಂದು ಗುರುತಿಸಲಾಗಿದ್ದು, ಕಡಬದ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು