Tuesday, January 21, 2025
ಸುದ್ದಿ

ಜೂ.23 ರಂದು ಪುತ್ತೂರಿನಲ್ಲಿ ಬಿಜೆಪಿ ಅಭಿನಂದನಾ ಸಭೆ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ಜೂ.23 ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ, ಮಂಗಳೂರು ಲೋ.ಸ ಸಂಸದ ನಳಿನ್ ಕುಮಾರ್ ಕಟೀಲ್, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ವಿವಿಧ ನಾಯಕರು ಪಾಲ್ಗೊಳ್ಳಲಿದ್ದಾರೆ.

ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪುತ್ತೂರು ನಗರ ಮಂಡಲ ಬಿಜೆಪಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಪುತ್ತೂರು, ಜೀವಂಧರ್ ಜ್ಯೆನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು