Tuesday, January 21, 2025
ಸುದ್ದಿ

ಭಾರತದ ಹಳ್ಳಿ ಹಳ್ಳಿಗಳಲ್ಲೂ ಇನ್ನು ರೈಲು ಸಂಚಾರ – ಕಹಳೆ ನ್ಯೂಸ್

ನವದೆಹಲಿ: ಭಾರತದಲ್ಲಿ ರೈಲ್ವೆ ಸೇವೆಯನ್ನು ಇನಷ್ಟು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಹೊಸ ಹೊಸ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಯೋಜನೆಯ ಪ್ರಕಾರ, ಮುಂದಿನ 100 ದಿನಗಳಲ್ಲಿ ಟೆಂಡರ್ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ. ಪ್ರಮುಖ ನಗರಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲೇ ಈ ರೈಲುಗಳು ಸಂಚರಿಸಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರೈಲ್ವೆ ಖಾಸಗೀಕರಣಕ್ಕೆ ವಿರೋಧ ವ್ಯಕ್ತವಾಗಬಹುದಾದ ಸಾಧ್ಯತೆಯ ಹಿನ್ನೆಲೆಯಲ್ಲಿ, ಈ ಪ್ರಕ್ರಿಯೆ ಆರಂಭಕ್ಕೂ ಮುನ್ನ ರೈಲ್ವೆ ನೌಕರರು ಹಾಗೂ ಇತರ ಸಂಘಟನೆಗಳ ಮುಖಂಡರ ಸಲಹೆ ಪಡೆದು, ನಿರ್ಧರಿಸಲಾಗುತ್ತದೆ.

ರೈಲ್ವೆ ಮಂಡಳಿಯ ಇನ್ನೊಂದು ಯೋಜನೆಯೆಂದರೆ, ಕೋಚ್ ಹಾಗೂ ಇತರ ಭಾಗಗಳ ಉತ್ಪಾದನೆ ಯೂನಿಟ್‍ಗಳನ್ನು ಖಾಸಗಿಯವರಿಗೆ ನೀಡುವುದು. ದೇಶದಲ್ಲಿ ಒಟ್ಟು 7 ಉತ್ಪಾದನಾ ಘಟಕಗಳಿವೆ. ಉತ್ಪಾದನಾ ಘಟಕಗಳು ಮತ್ತು ವರ್ಕ್‍ಶಾಪ್‍ಗಳನ್ನು ಹೊಸ ಸಂಸ್ಥೆಗೆ ವರ್ಗಾಯಿಸಲಾಗುತ್ತದೆ. ಇದಕ್ಕಾಗಿ ‘ಇಂಡಿಯನ್ ರೈಲ್ವೇಸ್ ರೋಲಿಂಗ್ ಸ್ಟಾಕ್’ ಕಂಪನಿ ಸ್ಥಾಪಿಸಲಾಗುತ್ತದೆ. ಪ್ರತಿ ಉತ್ಪಾದನಾ ಘಟಕದ ಸಿಇಒ ಲಾಭ ನಷ್ಟದ ವರದಿ ಸಿದ್ಧಪಡಿಸಿ, ಅದನ್ನು ಹೊಸ ಸಂಸ್ಥೆಯ ಮೇಲ್ವಿಚಾರಕರಿಗೆ ವರದಿ ಮಾಡಬೇಕಾಗುತ್ತದೆ. ಈಗಾಗಲೇ ಈ ಸಂಬಂಧ ಕಾರ್ಮಿಕ ಸಂಘಟನೆಗಳ ಜೊತೆಗೆ ಮಾತುಕತೆ ನಡೆದಿದ್ದು, ರಾಯ್‍ಬರೇಲಿಯಲ್ಲಿರುವ ಮಾಡರ್ನ್ ಕೋಚ್ ಫ್ಯಾಕ್ಟರಿಯಿಂದಲೇ ಈ ಪ್ರಕ್ರಿಯೆ ಆರಂಭಿಸಲು ನಿರ್ಧರಿಸಲಾಗಿದೆ.