Monday, November 25, 2024
ಸುದ್ದಿ

ಫಿಲೋಮಿನಾ ಕಾಲೇಜಿನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿ ಜೀವನವು ಅಮೂಲ್ಯವಾದುದು. ಶಿಕ್ಷಣವು ಮಾನವನ ಭವಿಷ್ಯವನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಸ್ವಸಾಮರ್ಥ್ಯವನ್ನು ರಚನಾತ್ಮಕ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಮೂಲಕ ಶಿಕ್ಷಣ ಸಂಸ್ಥೆಯ ಪ್ರತಿಷ್ಠೆಯನ್ನು ಉತ್ತುಂಗಕ್ಕೆ ಕೊಂಡೊಯ್ಯುವಲ್ಲಿ ಕಾರಣಕರ್ತರಾಗಬೇಕು ಎಂದು ಸಂತ ಫಿಲೋಮಿನಾ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಹೇಳಿದರು.

ಅವರು ಜೂನ್ 20ರಂದು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಸಂತ ಫಿಲೋಮಿನಾ ಕಾಲೇಜಿನ ಶೈಕ್ಷಣಿಕ ವರ್ಷ 2019-20ರ ಸಾಲಿನ ದ್ವಿತೀಯ ಮತ್ತು ತೃತೀಯ ವರ್ಷದ ಪದವಿ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಓರಿಯೆಂಟೇಶನ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. ಸಂತ ಫಿಲೋಮಿನಾ ಕಾಲೇಜು ಕಳೆದ ಆರು ದಶಕಗಳಲ್ಲಿ ಸಂಸದರು, ಶಾಸಕರು, ನ್ಯಾಯಾಧೀಶರು, ಆಡಳಿತಗಾರರು, ಕ್ರೀಡಾಪಟುಗಳು, ಕಲಾವಿದರು, ಉದ್ಯಮಿಗಳು, ವಿಜ್ಞಾನಿಗಳು ಮುಂತಾದವರನ್ನು ಸಮಾಜಕ್ಕೆ ಸಮರ್ಪಸುವ ಮೂಲಕ ಅಧ್ಭುತ ಸಾಧನೆಯನ್ನು ಮಾಡಿರುವುದು ಹೆಗ್ಗಳಿಕೆಯ ಸಂಗತಿ. ಕಾಲೇಜಿನ ಸಮವಸ್ತ್ರವನ್ನು ಧರಿಸಿದ ಪ್ರತಿಯೊಬ್ಬ ವಿದ್ಯಾರ್ಥಿಯೂ ಎಚ್ಚರದಿಂದ ವರ್ತಿಸುವುದು ಆದ್ಯ ಕರ್ತವ್ಯವಾಗಿದೆ. ಬದುಕಿಗೆ ಉಪಯುಕ್ತವಾದ ಶೈಕ್ಷಣಿಕ ಚಟುವಟಿಕೆಗಳನ್ನು ಹಮ್ಮಿಕೊಂಡಾಗ ಅವುಗಳಿಗೆ ಹಾಜರಾಗುವುದು ಆದ್ಯ ಕರ್ತವ್ಯ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಲೇಜಿನ ಕಲಾ ವಿಭಾಗದ ಡೀನ್ ಹಾಗೂ ಕಾಲೇಜಿನ ವಾರ್ಷಿಕ ಸಂಚಿಕೆ ಫಿಲೋಪ್ರಭಾ 2019 ಇದರ ಸಹ ಸಂಪಾದಕ ಪ್ರೊ. ಗಣಪತಿ ಎಸ್ ಮಾತನಾಡಿ, ವಾರ್ಷಿಕ ಸಂಚಿಕೆಯು ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರತಿಬಿಂಬಿಸಬಲ್ಲ ಒಂದು ಪ್ರಮುಖ ಸಾಧನ. ಈ ಸಂಚಿಕೆಯು ವಿದ್ಯಾರ್ಥಿಗಳ ಲೇಖನ, ಪ್ರಬಂಧ, ಚಿತ್ರಕಲೆ, ಛಾಯಾಚಿತ್ರ ಮುಂತಾದವುಗಳನ್ನು ಒಳಗೊಂಡಿರುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನಲ್ಲಿರುವ ಸಾಮರ್ಥ್ಯವನ್ನು ರಚನಾತ್ಮಕವಾಗಿ ಬಳಸಿಕೊಂಡಾಗ ಸುಂದರ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಲೇಜಿನ ಪ್ರಾಚಾರ್ಯ ಪ್ರೊ. ಲಿಯೋ ನೊರೊನ್ಹಾ ಮಾತನಾಡಿ, ಶಿಕ್ಷಣವು ಮಾನವನ ಶಕ್ತಿ ಸಾಮರ್ಥ್ಯವನ್ನು ನಿರ್ಧರಿಸಬಲ್ಲ ಒಂದು ಅಮೂಲ್ಯ ಪ್ರಕ್ರಿಯೆ. ಸೃಜನಶೀಲ ವಿದ್ಯಾರ್ಥಿಗಳು ಅಧ್ಯಯನದಲ್ಲಿ ನಿರಂತರ ಕಾರ್ಯಪ್ರವೃತ್ತರಾದಾಗ ಶಿಕ್ಷಣ ಸಂಸ್ಥೆಗಳು ಸಮಾಜದಲ್ಲಿ ಛಾಪು ಮೂಡಿಸಲು ಸಾಧ್ಯವಿದೆ. ವಿದ್ಯಾರ್ಥಿಗಳು ಅಧ್ಯಯನಶೀಲತೆ, ರಚನಾತ್ಮಕತೆ, ಆಶಾವಾದ, ಸಮಯಪಾಲನೆ, ಶಿಸ್ತು, ಗುಣ ನಡತೆ, ಸತತ ಪಠ್ಯಾಭ್ಯಾಸ, ಅವಕಾಶಗಳ ಸದ್ಭಳಕೆ, ಸಾಮರಸ್ಯ, ಸೌಚ್ಛತೆ ಮುಂತಾದವುಗಳನ್ನು ಗಂಭೀರವಾಗಿ ಪರಿಗಣಿಸುವ ಮೂಲಕ ಮೇಲ್ಪಂಕ್ತಿಯ ನಾಗರಿಕರಾಗಲು ಪ್ರಯತ್ನಿಸಬೇಕು ಎಂದು ಹೇಳಿ, ಕಾಲೇಜಿನ ನೀತಿ ನಿಬಂಧನೆಗಳ ಕುರಿತು ಮಾಹಿತಿ ನೀಡಿದರು.

ವಿದ್ಯಾರ್ಥಿ ಸಾತ್ವಿಕ್ ಬೆಡೇಕರ್ ಪ್ರಾರ್ಥಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಭಾರತಿ ಎಸ್ ರೈ ಸ್ವಾಗತಿಸಿದರು. ಕ್ಷೇಮಪಾಲನಾಧಿಕಾರಿ ಡಾ| ಕೆ. ಚಂದ್ರಶೇಖರ ಕಾರ್ಯಕ್ರಮ ನಿರೂಪಿಸಿದರು.