Sunday, November 24, 2024
ಸುದ್ದಿ

ಆರ್‍ಎಸ್‍ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್‍ರವರ ಮೇಲಿದ್ದ ಕೇಸ್ ರದ್ದುಗೊಳಿಸಿದ ಹೈಕೋರ್ಟ್ – ಕಹಳೆ ನ್ಯೂಸ್

ಕಳೆದ ವಿಧಾನಸಭಾ ಚುನಾವಣೆಯ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಮತ್ತು ಪ್ರಚೋದನಾಕಾರಿ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‍ಎಸ್‍ಎಸ್ ಹಿರಿಯ ಮುಖಂಡರಾದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈ ಕೋರ್ಟ್ ರದ್ದು ಮಾಡಿದೆ.

2018 ಏಪ್ರಿಲ್ 15 ರಂದು ಬಜ್ಪೆಯ ಕಜೆ ಪದವಿನಲ್ಲಿ ನಡೆದಿದ್ದ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಘಟಕದ ದಶಮಾನೋತ್ಸವದ ಪ್ರಯುಕ್ತದ ಧಾರ್ಮಿಕ ಸಭೆಯಲ್ಲಿ ಡಾ. ಪ್ರಭಾಕರ್ ಭಟ್‍ರವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಲ್ಲದೆ ಪ್ರಚೋದನಾಕಾರಿ ಭಾಷಣ ನಡೆಸಿದ್ದಾರೆ ಎಂದು ದೂರು ದಾಖಲಾಗಿತ್ತು. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಫ್ಲೈಯಿಂಗ್ ಸ್ಕ್ಯಾಡ್ ಅಧಿಕಾರಿ ಗಿರೀಶ್ ಶೆಟ್ಟಿಗಾರ್‍ರವರು ನೀಡಿದ್ದ ದೂರಿನಂತೆ ಪ್ರಕರಣ ಬಜ್ಪೆ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಪ್ರಭಾಕರ್ ಭಟ್ ಅವರು ತನ್ನ ಮೇಲಿನ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ದಿನೇಶ್ ಕುಮಾರ್ ಇದ್ದ ಪೀಠ ಬಜ್ಪೆ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಮತ್ತು ಅದರ ಸಂಬಂಧ ಅಧೀನ ನ್ಯಾಯಾಲಯದ ವಿಚಾರಣೆಯನ್ನು ರದ್ದುಗೊಳಿಸಲು ಆದೇಶಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಡಾ. ಪ್ರಭಾಕರ ಭಟ್‍ರವರ ಪರ ಹೈಕೋರ್ಟ್‍ನಲ್ಲಿ ವಾದ ಮಂಡಿಸಿದ್ದ ವಕೀಲ ಅರುಣ್ ಶ್ಯಾಮ್ ಪುತ್ತೂರುರವರ, ಪ್ರಭಾಕರ್ ಭಟ್‍ರವರ ವಿರುದ್ಧದ ಆರೋಪಗಳು ಅಸಂಜ್ಞೇಯ ಅಪರಾಧದ ಸ್ವರೂಪದ್ದಾಗಿದೆ. ಈ ಬಗ್ಗೆ ಕೇಸು ದಾಖಲಿಸಬೇಕಾದರೆ ಮ್ಯಾಜಿಸ್ಟ್ರೇಟರಿಂದ ಪೂರ್ವಾನುಮತಿ ಪಡೆದುಕೊಳ್ಳಬೇಕಿದೆ. ಈ ಪ್ರಕರಣದಲ್ಲಿ ಕಾನೂನು ಪ್ರಕ್ರಿಯೆಗಳನ್ನು ಸರಿಯಾಗಿ ಪಾಲಿಸಿಲ್ಲ, ಮಾತ್ರವಲ್ಲದೆ ಪ್ರಕರಣವು ರಾಜಕೀಯ ಪ್ರೇರಿತವಾಗಿದೆ. ಆದ್ದರಿಂದ ಪ್ರಕರಣವನ್ನು ರದ್ದುಗೊಳಿಸಬೇಕೆಂದು ನ್ಯಾಯಪೀಠದ ಗಮನ ಸೆಳೆದಿದ್ದರು.