ಪುತ್ತೂರು:ಅಖಿಲ ಭಾರತ ತುಳು ಒಕ್ಕೂಟ(ರಿ) ಕುಡ್ಲ ಇದರ ಆಶ್ರಯದಲ್ಲಿ ಶ್ರೀ ರಾಮಕೃಷ್ಣ ಪ್ರೌಢಶಾಲೆ, ಪುತ್ತೂರು ಇದರ ಸಹಯೋಗದೊಂದಿಗೆ, ಎಸ್.ಎಸ್.ಎಲ್.ಸಿ.ಯಲ್ಲಿ ತುಳು ಭಾಷೆಯಲ್ಲಿ ಅಮೋಘ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಗೌರವದ ಸನ್ಮಾನ ಕಾರ್ಯಕ್ರಮವನ್ನು ನಾಳೆ ಬೆಳಗ್ಗೆ ೯:೩೦ಕ್ಕೆ ಕೊಂಬೆಟ್ಟಿನ ಭಂಟರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಶಾಸಕರಾದ ಸಂಜೀವ ಮಠಂದೂರು ನೆರವೇರಿಸಲಿದ್ದರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತ ತುಳು ಒಕ್ಕೂಟ ಕುಡ್ಲದ ಅಧ್ಯಕ್ಷರಾದ ಧರ್ಮಪಾಲ ಯು.ದೇವಾಡಿಗ ವಹಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಎಸಿ ಭಂಡಾರಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೈ ಶಿವರಾಮಯ್ಯ ಭಾಗವಹಿಸಲಿದ್ದಾರೆ.
ಶ್ರಿÃ ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ ಅಭಿನಂದನಾ ಭಾಷಣವನ್ನು ಮಾಡಲಿದ್ದಾರೆ. ಹಾಗೂ ಬರೋಡ ತುಳು ಸಂಘದ ಅಧ್ಯಕ್ಷರಾದ ಶಶಿಧರ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಸನ್ಮಾನವನ್ನು ಮಾಡಲಿದ್ದಾರೆ.