Tuesday, January 21, 2025
ಸುದ್ದಿ

ಜನತಾ ಪದವಿಪೂರ್ವ ಕಾಲೇಜಿನಲ್ಲಿ ಯೋಗ ದಿನಾಚರಣೆ – ಕಹಳೆ ನ್ಯೂಸ್

ಅಡ್ಯನಡ್ಕ: ಇಲ್ಲಿನ ಜನತಾ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ ವತಿಯಿಂದ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು.

ಮಂಗಳೂರು ವಿಶ್ವವಿದ್ಯಾನಿಲಯದ ಯೋಗ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ. ಉದಯಕುಮಾರ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಯೋಗದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಹಿಂದಿ ಉಪನ್ಯಾಸಕ ಸೋಮಶೇಖರ್ ಎಚ್. ಸ್ವಾಗತಿಸಿ, ಪರಿಚಯಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿ ಜಯಶ್ರೀ ಕೆ. ಆರ್. ಕಾರ್ಯಕ್ರಮ ನಿರೂಪಿಸಿ, ಕನ್ನಡ ಉಪನ್ಯಾಸಕ ಶೀನಪ್ಪ ನಾಯ್ಕ್ ವಂದಿಸಿದರು. ಸಾಹಿತ್ಯ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು