Wednesday, January 22, 2025
ಸುದ್ದಿ

ಉಚಿತ ಬಸ್‍ಪಾಸ್ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನಿಂದ ಪ್ರತಿಭಟನೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕ ವತಿಯಿಂದ ರಾಜ್ಯದ ಪ್ರತಿಭಾವಂತ ಹಾಗೂ ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಆಗ್ರಹಿಸಿ, ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ನಡೆದ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಇದರಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಬ್ರಹ್ಮಣ್ಯ ಘಟಕದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಎ.ಬಿ.ವಿ.ಪಿ ಸುಬ್ರಹ್ಮಣ್ಯ ಇದರ ನಗರಕಾರ್ಯದರ್ಶಿ ರಕ್ಷಿತ್ ಪರಮಲೆ ಮತ್ತು ಎಬಿವಿಪಿ ಸುಬ್ರಹ್ಮಣ್ಯ ಇದರ ಕಾರ್ಯಕರ್ತರಾದ ಲೋಹಿತ್.ಕೆ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು, ಮಂಜುನಾಥ್ ಸುಬ್ರಹ್ಮಣ್ಯ ವಂದನಾರ್ಪಣೆ ಗೈದರು.

ಜಾಹೀರಾತು
ಜಾಹೀರಾತು
ಜಾಹೀರಾತು