Wednesday, November 27, 2024
ಸುದ್ದಿ

ಫಿಲೋಮಿನಾದಲ್ಲಿ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಮೌಲ್ಯಯುತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದಾಗ ಉತ್ತಮ ಸಮಾಜವು ರೂಪುಗೊಳ್ಳುತ್ತದೆ. ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕುರಿತು ಉತ್ತಮ ಚಿಂತನೆಯನ್ನು ಹೊಂದಿರಬೇಕು ಎಂದು ಸಂತ ಫಿಲೋಮಿನಾ ಕಾಲೇಜಿನ ಸಂಚಾಲಕ ವಂ. ಆಲ್ಫ್ರೆಡ್ ಜೆ ಪಿಂಟೊ ಹೇಳಿದರು.

ಸಂತ ಫಿಲೋಮಿನಾ ಕಾಲೇಜಿನ ಸಭಾಂಗಣದಲ್ಲಿ ಜೂನ್ 21ರಂದು ಶೈಕ್ಷಣಿಕ ವರ್ಷ 2019-20 ರ ಸಾಲಿನಲ್ಲಿ ಪ್ರಥಮ ಪದವಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಸ್ವಾಗತ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಶಿಕ್ಷಣ ಮನುಕುಲದ ರಕ್ಷಣೆಯತ್ತ ಮುಖ ಮಾಡಬೇಕು. ಪ್ರಕೃತಿಯಲ್ಲಿ ಉಂಟಾಗುತ್ತಿರುವ ಏರುಪೇರನ್ನು ಗಮನಿಸಿ, ಅದಕ್ಕೆ ಸೂಕ್ತವಾದ ಪರಿಹಾರ ಕಂಡುಕೊಳ್ಳಬೇಕು. ಮಾನವನು ತನ್ನ ವಿಪರೀತ ಆಸೆ ಆಕಾಂಕ್ಷೆಗಳನ್ನು ಪೂರೈಸುವ ನಿಟ್ಟಿನಲ್ಲಿ ಪರಿಸರವು ಅಸಮತೋಲಕ್ಕೆ ಒಳಗಾಗುತ್ತದೆ. ಪ್ರಜ್ಞಾವಂತ ನಾಗರಿಕರಾದ ನಾವು ಎಚ್ಚೆತ್ತುಕೊಳ್ಳುವ ಅಗತ್ಯವಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಲೇಜಿನ ಪ್ರಾಚಾರ್ಯ ಪ್ರೊ. ಲಿಯೋ ನೊರೊನ್ಹಾ ಮಾತನಾಡಿ, ವಿದ್ಯೆಯಿಂದ ವಿನಯವಂತರಾಗಬೇಕು. ಗೌರವಯುತವಾಗಿ ಬದುಕಿ, ಸೌಹಾರ್ದಯುತವಾಗಿ ಸಮಾಜದಲ್ಲಿ ಬದುಕಬೇಕು. ವಿದ್ಯೆ ಪಡೆಯುವ ಮೂಲ ಉದ್ದೇಶ ಪರಪೂರ್ಣತೆಯೆಡೆಗೆ ಸಾಗುವುದಾಗಿರಬೇಕು. ಕಾಲೇಜು ಶಿಕ್ಷಣ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವಲ್ಲಿ ದಾರಿ ದೀಪವಾಗಬೇಕು. ವಿದ್ಯಾರ್ಥಿಗಳು ಭವಿಷ್ಯದ ಬಗೆಗೆ ಅಗಾಧವಾದ ನಿರೀಕ್ಷೆಗಳನ್ನಿಟ್ಟುಕೊಳ್ಳಬೇಕು ಎಂದು ಹೇಳಿ, ಕಾಲೇಜಿನ ನೀತಿ ನಿಯಮಗಳ ಕುರಿತು ಮಾಹಿತಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ರೆ. ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ ಮಾತನಾಡಿ, ವಿದ್ಯಾರ್ಥಿಗಳು ಸಾಮರಸ್ಯದಿಂದ ಬದುಕಬೇಕು. ಯಾವುದೇ ರಾಜಕೀಯ, ಧಾರ್ಮಿಕ ಚಟುವಟಿಕೆಗಳಿಗೆ ಪ್ರೇರಿತರಾಗಿ ಶಾಂತಿ ಕದಡದಂತೆ ಕಾಪಾಡಿಕೊಳ್ಳುವುದು ಅತಿ ಅಗತ್ಯ ಎಂದರು.

ಈ ಸಂದರ್ಭದಲ್ಲಿ ಬಿಎ, ಬಿಕಾಮ್, ಬಿಎಸ್ಸಿ, ಬಿಬಿಎ, ಬಿಸಿಎ ಮತ್ತು ಬಿಎಸ್‍ಡಬ್ಲ್ಯೂ ಪದವಿ ತರಗತಿಗಳಿಗೆ ದಾಖಲಾದ ವಿದ್ಯಾರ್ಥಿಗಳನ್ನು ಸಾಂಕೇತಿಕವಾಗಿ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು.

ವಿದ್ಯಾರ್ಥಿನಿ ಅನುರಾಧಾ ಭಾರದ್ವಾಜ್ ಪ್ರಾರ್ಥಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಭಾರತಿ ಎಸ್ ರೈ ಸ್ವಾಗತಿಸಿದರು. ಕ್ಷೇಮಪಾಲನಾಧಿಕಾರಿ ಡಾ| ಕೆ ಚಂದ್ರಶೇಖರ ಕಾರ್ಯಕ್ರಮ ನಿರೂಪಿಸಿದರು.