Wednesday, January 22, 2025
ಸುದ್ದಿ

ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಭಾಗದಲ್ಲಿ ಮಳೆರಾಯನ ಆರ್ಭಟ: 40ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು – ಕಹಳೆ ನ್ಯೂಸ್

ಕಾರವಾರ: ಶನಿವಾರದಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಭಾಗದಲ್ಲಿ ಮಳೆರಾಯನ ಆರ್ಭಟ ಜೋರಾಗಿತ್ತು. ಹೀಗಾಗಿ ಭಾರೀ ಮಳೆಗೆ ಗಂಗಾವಳಿ ನದಿ ತೀರ ಹಾಗೂ ಸಮುದ್ರ ತೀರದ ಗ್ರಾಮಗಳ ಸುಮಾರು 40ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಗಂಗಾವಳಿ ನದಿ ತೀರ ಹಾಗೂ ಸಮುದ್ರ ತೀರದ ಗ್ರಾಮಗಳಾದ ಕೋಡ್ಸಣಿ, ಪೋಜಗೇರಿ, ವಾಸರೆ, ಕುರ್ವೆ ಸೇರಿದಂತೆ ಸುತ್ತಮುತ್ತಲ ಗ್ರಾಮದ 40ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಗೆಯೇ ಘಟನಾ ಸ್ಥಳಕ್ಕೆ ಅಂಕೋಲ ತಹಶಿಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲೆಯಲ್ಲಿ ಇಂದು ಕೂಡ ಮಳೆಯ ಆರ್ಭಟ ಮುಂದುವರಿದಿದ್ದು, ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ ಎಂದು ವರದಿಯಾಗಿದೆ. ಮಳೆಯಿಂದಾಗಿ ಸಾಕಷ್ಟು ಹಾನಿಯಾಗಿದ್ದರಿಂದ ಅಂಕೋಲದಲ್ಲಿ ತಾತ್ಕಾಲಿಕ ಗಂಜಿ ಕೇಂದ್ರ ಹಾಗೂ 24 ಘಂಟೆಗಳ ಸಹಾಯವಾಣಿಯನ್ನು ತೆರೆಯಲಾಗಿದೆ.