Thursday, January 23, 2025
ಸುದ್ದಿ

ಜೂನ್ 27ರಂದು ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ದಶಮಾನೋತ್ಸವದ ಉದ್ಘಾಟನಾ ಸಮಾರಂಭ ಹಾಗೂ ಪ್ರವೇಶೋತ್ಸವ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರ ಪ್ರಥಮ ದರ್ಜೆ ಮಹಾವಿದ್ಯಾಲಯ ಇದರ ದಶಮಾನೋತ್ಸವದ ಉದ್ಘಾಟನೆ ಹಾಗೂ ಪ್ರಥಮ ಪದವಿ ವಿದ್ಯಾರ್ಥಿಗಳ ಪ್ರವೇಶೋತ್ಸವ ಜೂನ್ 27ರಂದು ವೇದವ್ಯಾಸ ಧ್ಯಾನಮಂದಿರದಲ್ಲಿ ನಡೆಯಲಿದೆ. ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ವಹಿಸಲಿದ್ದಾರೆ.

ಉದ್ಘಾಟನೆಯನ್ನು ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ನೆರವೇರಿಸಿದ್ದಾರೆ. ಈ ವೇಳೆ ಮುಖ್ಯ ಅಭ್ಯಾಗತರಾಗಿ ಉದ್ಯಮಿಗಳಾದ ಪ್ರಕಾಶ್ ಭಟ್, ಕುಸುಮಾಧರ ಡಿ. ಶೆಟ್ಟಿ, ಚಂದ್ರಶೇಖರ, ಬೆಳಗಾವಿಯ ಕುಡಚಿ ಶಾಸಕ ಪಿ ರಾಜೀವ, ಎನ್‍ಎಂಪಿಟಿ ಅಧ್ಯಕ್ಷ ಎ ವಿ ರಮಣ ಇವರ ಉಪಸ್ಥಿತಿ ಇರಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು