Thursday, January 23, 2025
ಸುದ್ದಿ

ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಯೋಗ ದಿನಾಚರಣೆ – ಕಹಳೆ ನ್ಯೂಸ್

ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಯೋಗ ದಿನಾಚರಣೆ ನಡೆಸಲಾಯಿತು. ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಶ್ರೀ ಗೋಪಾಲಕೃಷ್ಣ ದೇಲಂಪಾಡಿಯವರು ವಿದ್ಯಾರ್ಥಿಗಳನ್ನುದ್ದೇಶಿಸಿ ” ಯೋಗವು ಒಬ್ಬ ವ್ಯಕ್ತಿಗೆ ಉಂಟಾಗುವ ಒತ್ತಡಗಳನ್ನ ನಿರ್ವಹಿಸಲು ಸಹಕಾರಿಯಾಗುತ್ತದೆ. ಮಾನಸಿಕ ಮತ್ತು ದೈಹಿಕ ಶಾಂತಿಯನ್ನು ಸಾಧಿಸಲು ಇರುವ ಯೊಗ್ಯ ಶಿಕ್ಷಣವೇ ಯೋಗ ” ಎಂದು ನುಡಿದರು. ಅವರು ಆಸನಗಳ ಪ್ರಾತ್ಯಕ್ಷಿಕೆಯ ಮೂಲಕ ವಿದ್ಯಾರ್ಥಿಗಳಲ್ಲಿ ಯೋಗದ ಅರಿವು ಮೂಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಲೇಜಿನ ಉಪನ್ಯಾಸಕರಾದ ಶ್ರೀ ಗಣರಾಜ ಕುಂಬ್ಳೆ ಸ್ವಾಗತಿಸಿ ಸಂಪನ್ಮೂಲ ವ್ಯಕ್ತಿಯವರನ್ನು ಪರಿಚಯಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಂ. ಸತೀಶ್ ಭಟ್ ಧನ್ಯವಾದ ಸಮರ್ಪಿಸಿದರು. ವೇದಿಕೆಯಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಸತೀಶ್ ಭಟ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ವಿಭಾಗಗಳ ಉಪನ್ಯಾಕರುಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು ಸಹಕಾರ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು