Wednesday, January 22, 2025
ಸುದ್ದಿ

ಪುತ್ತೂರು-ಮಂಗಳೂರು ಖಾಸಗಿ ಬಸ್ಸುಗಳ ಮೇಲೆ ಕಲ್ಲು ತೂರಾಟ..! – ಕಹಳೆ ನ್ಯೂಸ್

ವಿಟ್ಲ: ಜಿಲ್ಲೆಯಲ್ಲಿ ನಡೆಯುತ್ತಿರುವ ಗೋ ಸಾಗಾಟ ವಿವಾದದ ಬೆನ್ನಲ್ಲೇ ದ.ಕ ಜಿಲ್ಲೆಯಲ್ಲಿ ಹಲವೆಡೆ ಬಸ್‍ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಟ್ಲ ಠಾಣಾ ವ್ಯಾಪ್ತಿಯ ಸೂರಿಕುಮೇರ್, ಹಾಗೂ ಬಂಟ್ವಾಳ ಠಾಣಾ ವ್ಯಾಪ್ತಿಯ ಕುದುರೆಬೆಟ್ಟುವಿನಲ್ಲಿ ಬೆಳ್ಳಂಬೆಳಗ್ಗೆ, ಬೈಕಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳಿಂದ ಕಲ್ಲು ತೂರಾಟ ನಡೆಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ಕಡೆಯಿಂದ ಮಾಣಿ ಮೂಲಕ ಪುತ್ತೂರು ಕಡೆಗೆ ತೆರಳುವ ‘ಸೆಲಿನಾ’ ಮತ್ತು ಸೇಫ್ ವೇ ಹಾಗೂ ಪುತ್ತೂರಿನಿಂದ ಮಂಗಳೂರಿಗೆ ಸಾಗುತ್ತಿದ್ದ ಒಟ್ಟು ಮೂರು ಖಾಸಗಿ ಬಸ್‍ಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ಘಟನೆಯಲ್ಲಿ ಬಸ್‍ಗಳ ಗಾಜು ಸಂಪೂರ್ಣ ಧ್ವಂಸಗೊಂಡಿದೆ ಹಾಗೂ ಕಲ್ಲು ತೂರಾಟದಿಂದ, ಬಸ್ಸ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಸೋಮವಾರ ಕೇರಳ ಭಾಗದ ಅಡ್ಯನಡ್ಕದಲ್ಲಿ ಗೋ ಸಾಗಾಟಗಾರರ ಮೇಲೆ ಹಲ್ಲೆ ನಡೆಸಿ ಹಣ ಹಾಗೂ ಪಿಕಪ್ ವಾಹನ ದರೋಡೆ ಮಾಡಿದ್ದಾರೆ ಎಂದು ಆರೋಪಿಸಿ ವಿಟ್ಲ ಪ್ರಖಂಡದ ಭಜರಂಗ ದಳದ ಮುಖಂಡ ಅಕ್ಷಯ್ ರಜಪೂತ್ ಸೇರಿದಂತೆ ಹಲವು ಮಂದಿ ಮೇಲೆ ಬದಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದೆ. ಆದರೆ ಈವರೆಗೆ ಘಟನೆಯ ವಾಸ್ತವತೆ ತಿಳಿದುಬಂದಿಲ್ಲ.

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪ್ರಾಯಾಣಿಕರು ಭಯದಲ್ಲೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿದ್ದಾರೆ.