Wednesday, January 22, 2025
ಸುದ್ದಿ

ಮೀಸಲಾತಿ ಆಗ್ರಹಿಸಿ ವಾಲ್ಮೀಕಿ ಪರಿಶಿಷ್ಠ ಪಂಗಡದಿಂದ ವಿಧಾನ ಸೌಧದ ಎದುರುಗಡೆ ಪ್ರತಿಭಟನೆ , ಪ್ರತಿಭಟನೆ ಬಿಸಿಗೆ ಮೆಟ್ರೋ ಹತ್ತಿದ ಡಿಕೆಶಿ – ಕಹಳೆ ನ್ಯೂಸ್

ಬೆಂಗಳೂರು : ವಾಲ್ಮೀಕಿ ಪರಿಶಿಷ್ಠ ಪಂಗಡಕ್ಕೆ ಮೀಸಲಾತಿಗೆ ಒತ್ತಾಯಿಸಿ ವಿಧಾನ ಸೌಧದ ಎದುರುಗಡೆ ವಾಲ್ಮೀಕಿ ಸಂಘಟನೆಯಿಂದ ಪ್ರತಿಭಟನೆ ನಡೆಯಿತು. ವಾಲ್ಮೀಕಿ ಪರಿಶಿಷ್ಠ ಪಂಗಡಕ್ಕೆ ಮೀಸಲಾತಿ ಪ್ರಮಾಣವನ್ನ ಶೇ 0.3ರಿಂದ ಶೇ 7.5ರಷ್ಟಕ್ಕೆ ಹೆಚ್ಚಿಸಬೇಕು ಎಂದು ಉತ್ತಾಯಿಸಿ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ದಾವಣಗೆರೆ ಜಿಲ್ಲೆ ರಾಜನಹಳ್ಳಿಯಿಂದ ಜೂನ್ 9 ರಂದು ಆರಂಭಿಸಿ ಮಹರ್ಷಿ ವಾಲ್ಮೀಕಿ ಮತ್ತು ಅಂಬೇಡ್ಕರ್ ಭಾವಚಿತ್ರದೊಂದಿಗೆ ಬಿಸಿಲು-ಮಳೆ ಎನ್ನದೆ 16 ದಿನಗಳ ಕಾಲ ಪಾದಯಾತ್ರೆ ನಡೆಸಿದ್ದು, ನಿನ್ನೆ ಬೆಂಗಳೂರು ತಲುಪಿದ್ದರು. ಆಯಾ ನಗರದಲ್ಲಿ ಸ್ವಾಮೀಜಿಯನ್ನ ಸಮುದಾಯುದ ಜನತೆ ಸ್ವಾಗತಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ‘ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು 7.5ರಷ್ಟಕ್ಕೆ ಹೆಚ್ಚಿಸಬೇಕು’. ಪರಿಶಿಷ್ಟ ಪಂಗಡಕ್ಕೆ ಸೇರಿದವರು ರಾಜ್ಯದಲ್ಲಿ 50 ಲಕ್ಷಕ್ಕೂ ಹೆಚ್ಚು ಮಂದಿ ಇದ್ದೇವೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕೆಂದು ಮನವರಿಕೆ ಮಾಡಿಸುವ ಸಲುವಾಗಿ ಪಾದಯಾತ್ರೆ ನಡೆಸಲಾಗಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಇಲ್ಲವಾದಲ್ಲಿ ಮುಂದೆ ಉಗ್ರ ಹೋರಾಟ ಮಾಡಲಾಗುವುದು ಎಂದು ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಬೆಳ್ಳಗ್ಗೆ ವಿಧಾನಸೌಧದ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸ್ವತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಮಾಡಲಾಯಿತು. ಈ ವೇಳೆ ಒಂದು ಲಕ್ಷಕ್ಕೂ ಅಧಿಕ ಮಂದಿ ಆಗಮಿಸಿದ್ದರು. ಸರ್ಕಾರದ ಮೇಲೆ ಒತ್ತಡ ಹೇರಲು ಸಮುದಾಯದ ಜನತೆ ಮುಂದಾಗಿದ್ದು, ಬೆಂಗಳೂರು ನಗರದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಿದರು.

ಈ ವೇಳೆ ಅಕ್ರಮ ಆಸ್ತಿ ಪ್ರಕರಣದ ತೀರ್ಪು ಆಲಿಸಲು ವಿಶೇಷ ನ್ಯಾಯಾಲಯಕ್ಕೆ ತೆರಳಬೇಕಿದ್ದ ಸಚಿವ ಡಿಕೆ ಶಿವಕುಮಾರ್ ಅವರು ಟ್ರಾಫಿಕ್ ಸಮಸ್ಯೆಯಿಂದಾಗಿ ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡಿದರು. ವಿಧಾನ ಸೌಧದ ಎದುರು ಪ್ರತಿಭಟನೆ ನಡೆಯುತ್ತಿರುವ ಕಾರಣ, ಈ ಪ್ರದೇಶದಲ್ಲಿ ಹೆವಿ ಟ್ರಾಫಿಕ್ ಕಂಡುಬಂದಿತ್ತು. ದೆಹಲಿಯಲ್ಲಿರುವ ಡಿ.ಕೆ. ಶಿವಕುಮಾರ್ ಅವರ ನಿವಾಸದ ಮೇಲಿನ ಆದಾಯ ತೆರಿಗೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯ ಇಂದು ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಡಿಕೆಶಿ ಅವರು ನ್ಯಾಯಾಲಯಕ್ಕೆ ತೆರಳಬೇಕಿತ್ತು. ನ್ಯಾಯಾಲಯಕ್ಕೆ ತೆರಳಲು ವಿಳಂಬವಾಗುತ್ತದೆ ಎಂಬ ಕಾರಣಕ್ಕೆ ಅವರು ತಕ್ಷಣವೇ ಕಾರಿನಿಂದ ಇಳಿದು, ನಮ್ಮ ಮೆಟ್ರೋ ಮೂಲಕ ಪ್ರಯಾಣಿಸಿ, ವಿಶೇಷ ನ್ಯಾಯಾಲಯ ತಲುಪಿದರು.

ಈ ವೇಳೆ ವಿಧಾನ ಸೌಧದ ಎದುರುಗಡೆ ಪ್ರತಿಭಟನಾಗಾರರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮಾಡಿದ್ದರಿಂದ ಸಾರ್ವಜನಿಕರೂ ಪರದಾಡುವಂತಾಯಿತು. ಕೆಲ ಹೊತ್ತು ಟ್ರಾಫಿಕ್ ಜಾಮ್ ಆಗಿತ್ತು. ಇನ್ನು ಈ ಸಂದರ್ಭದಲ್ಲಿ ಪ್ರತಿಭಟನಾಕಾರರಿಂದ ಕುಮಾರಸ್ವಾಮಿ ಸರ್ಕಾರಕ್ಕೆ ಧಿಕ್ಕಾರ ಎಂಬ ಕೂಗು ಕೇಳಿ ಬಂತು.