Recent Posts

Tuesday, January 21, 2025
ಸುದ್ದಿ

ಬಸ್‌ ದರ ಹೆಚ್ಚಳ ಮಾಡುವಂತೆ ಸಾರಿಗೆ ಇಲಾಖೆ ಪ್ರಸ್ತಾವನೆ: ದರ ಹೆಚ್ಚಳಕ್ಕೆ ತಾತ್ಕಾಲಿಕ ಬ್ರೇಕ್‌ ಎಂದ ಎಚ್‌.ಡಿ.ಕುಮಾರಸ್ವಾಮಿ – ಕಹಳೆ ನ್ಯೂಸ್

ಬೆಂಗಳೂರು : ಬಸ್‌ ದರ ಏರಿಕೆ ಅನಿವಾರ್ಯತೆಗೆ ಸಂಬಂಧಿಸಿದಂತೆ ಸೂಕ್ತ ಸಮರ್ಥನೆಗಳೊಂದಿಗೆ ಮರು ಪ್ರಸ್ತಾವನೆ ಸಲ್ಲಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಮೂಲಕ ಬಸ್‌ ದರ ಹೆಚ್ಚಳ ಮಾಡುವಂತೆ ಸಾರಿಗೆ ಇಲಾಖೆ ಮುಂದಿಟ್ಟಿದ್ದ ಪ್ರಸ್ತಾವನೆಗೆ ಮುಖ್ಯಮಂತ್ರಿಗಳು ತಾತ್ಕಾಲಿಕ ಬ್ರೇಕ್‌ ಹಾಕಿದ್ದಾರೆ.

ಸೋಮವಾರ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಾರಿಗೆ ಇಲಾಖೆ ಮತ್ತು ಸಾರಿಗೆ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾರಿಗೆ ಇಲಾಖೆ ಮತ್ತು ಸಾರಿಗೆ ಸಂಸ್ಥೆಗಳನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮದ ಬಗ್ಗೆ ಮತ್ತು ಬೆಂಗಳೂರು ನಗರದಲ್ಲಿ ಎಲೆಕ್ಟ್ರಿಕ್‌ ಬಸ್‌ಗಳನ್ನು ಪರಿಚಯಿಸುವ ಕುರಿತು ವಿವರವಾದ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳು ನಿರ್ದೇಶನ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತಷ್ಟು ಜನಸ್ನೇಹಿಯಾಗಬೇಕು. ಸಾರಿಗೆ ಇಲಾಖೆಯು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಸಲಹೆ ನೀಡಿದರು. ಡೀಸೆಲ್‌ ಬೆಲೆ ಹೆಚ್ಚಾಗಿದ್ದರೂ ಕಳೆದ ನಾಲ್ಕು ವರ್ಷಗಳಿಂದ ಬಸ್‌ ಟಿಕೆಟ್‌ ದರ ಹೆಚ್ಚಳ ಮಾಡದಿರುವ ಕಾರಣ ಬಸ್‌ ಟಿಕೆಟ್‌ ದರವನ್ನು ಹೆಚ್ಚಿಸಬೇಕು. ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತಷ್ಟು ಜನಸ್ನೇಹಿಯಾಗಬೇಕು. ಗಾರ್ಮೆಂಟ್‌ ಕಾರ್ಖಾನೆ ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆಯ ಬಸ್‌ಗಳನ್ನು ಬಳಸಿಕೊಳ್ಳಲು ಕಾರ್ಮಿಕ ಇಲಾಖೆಗೆ ಪ್ರಸ್ತಾವನೆ ಕಳುಹಿಸಲಾಗಿದೆ. ಕಾರ್ಮಿಕರು ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಲು ಬಸ್‌ಪಾಸ್‌ಗಳನ್ನು ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಎಂಟಿಸಿಯನ್ನು ಸಂಪೂರ್ಣವಾಗಿ ಡಿಜಿಟಲೈಸ್‌ ಮಾಡಲು ಕ್ರಮ ಕೈಗೊಳ್ಳಬೇಕಿದೆ ಎಂದು ಬಿಎಂಟಿಸಿ ಅಧ್ಯಕ್ಷ ಎನ್‌.ಎ.ಹ್ಯಾರಿಸ್‌ ಸಭೆಯಲ್ಲಿ ಹೇಳಿದರು. ಹೊಸ ಬಸ್‌ ಖರೀದಿ, ಹೊಸ ಬಸ್‌ ನಿಲ್ದಾಣ, ಡಿಪೋಗಳ ನಿರ್ಮಾಣ ಮೊದಲಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.