Wednesday, January 22, 2025
ಸುದ್ದಿ

ಕಲ್ಲಡ್ಕ ಶ್ರೀರಾಮ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಶಾಲಾ ಚುನಾವಣೆ- ಕಹಳೆ ನ್ಯೂಸ್

ದಿನಾಂಕ 22/06/2019 ರಂದು ಕಲ್ಲಡ್ಕ ಶ್ರೀರಾಮ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಶಾಲಾ ಚುನಾವಣೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಭ್ಯರ್ಥಿಗಳು ಎಂಟು ಮತಕ್ಷೇತ್ರಗಳಲ್ಲಿ ಚುನಾವಣೆಗೆ ನಿಂತಿದ್ದು ನಾಲ್ಕು ಮತಗಟ್ಟೆಗಳನ್ನು ರಚಿಸಿ ಚುನಾವಣೆ ನಡೆಸಲಾಯಿತು. ವಿದ್ಯಾರ್ಥಿಗಳಲ್ಲಿ ಉತ್ತಮ ನಾಯಕನ ಆಯ್ಕೆ , ಮತದಾನ, ಪ್ರಜಾಪ್ರಭುತ್ವ ಮಹತ್ವ ಹಾಗೂ ಚುನಾವಣಾ ಪ್ರಕ್ರಿಯೆಯನ್ನು ತಿಳಿಸುವ ನಿಟ್ಟಿನಲ್ಲಿ ಈ ಮತದಾನವನ್ನು ಹಮ್ಮಿಕೊಳ್ಳಲಾಗಿತ್ತು. ಎಲ್ಲಾ ವಿದ್ಯಾರ್ಥಿಗಳು ತಮ್ಮ ಗುರುತಿನ ಚೀಟಿಯೊಂದಿಗೆ ಶಿಸ್ತಿನಿಂದ ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಅಧಿಕಾರಿಗಳು ಶಾಲಾ ಚುಣಾವಣೆ ಯಶಸ್ವಿಯಾಗುವಲ್ಲಿ ಸಹಕರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮತದಾನದ ಎಣಿಕೆಯು ದಿನಾಂಕ 24/06/2019 ರ ಸೋಮವಾರದಂದು ಶಾಲಾ ಮುಖ್ಯ ಶಿಕ್ಷಕರ ಉಪಸ್ಥಿತಿಯಲ್ಲಿ ವೇದವ್ಯಾಸ ಧ್ಯಾನ ಮಂದಿರದಲ್ಲಿ ನಡೆಸಲಾಗುವುದು.