ಮಂಗಳೂರು: ಲವ್ ಜಿಹಾದ್ ವಿರುದ್ದ ಜಾಗೃತಿ ಅಭಿಯಾನ ನಡೆಸಲು ವಿಎಚ್‍ಪಿ, ಬಜರಂಗದಳ ಹಾಗೂ ದುರ್ಗಾವಾಹಿನಿ ಸಂಘಟನೆಗಳು ನಿರ್ಧರಿಸಿವೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಂಚಾಲಕರಾದ ಶರಣ್ ಪಂಪ್ವೆಲ್ ಹೇಳಿದರು.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಹತ್ತಾರು ಯುವತಿಯರು ಮನೆಯಿಂದ ನಾಪತ್ತೆಯಾಗಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಹೀಗಾಗಿ ಈ ಹಿನ್ನಲೆಯಲ್ಲಿ ಮನೆ ಮನೆಗೆ ತೆರಳಿ ಹಿಂದೂ ಯುವತಿಯರಿಗೆ ಲವ್ ಜಿಹಾದ್‍ನಿಂದಾಗುವ ತೊಂದರೆಗಳ ಬಗ್ಗೆ ತಿಳಿವಳಿಕೆ ಮೂಡಿಸಲು ಹಿಂದೂಪರ ಸಂಘಟನೆಗಳು ನಿರ್ಧರಿಸಿವೆ.
ಜಾಗೃತಿಗಾಗಿ ಹಲವಾರು ತಂಡಗಳು ಸಿದ್ಧವಾಗಿದ್ದು ಕರಪತ್ರ ಹಂಚುವ ಮೂಲಕ, ಕಾಲೇಜು ವಿದ್ಯಾರ್ಥಿಗಳಿಗೆ ಲವ್ ಜಿಹಾದ್‍ನ ದುಷ್ಪರಿಣಾಮಗಳನ್ನು ಮನವರಿಕೆ ಮಾಡಲು ನಿರ್ಧರಿಸಿವೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ವಿಶ್ಚಹಿಂದೂ ಪರಿಷದ್ ಮುಖಂಡ ಎಂ.ಬಿ.ಪುರಾಣಿಕ್, ಉಸ್ಥಿತರಿದ್ದರು.
https://youtu.be/J4Lval9g85A