Tuesday, January 21, 2025
ಸುದ್ದಿ

ಕಿದು ತೆಂಗು ಸಂಶೋಧನಾ ಕೇಂದ್ರಕ್ಕೆ ಸುಬ್ರಹ್ಮಣ್ಯ ಶ್ರೀ ಭೇಟಿ; ಜನಪ್ರತಿನಿಧಿಗಳ ಇಚ್ಚಾಶಕ್ತಿಯಿಂದ ಕೇಂದ್ರದ ಉಳಿವು ಸಾಧ್ಯ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕಿದುವಿನ ಅಂತರಾಷ್ಟ್ರೀಯ ತೆಂಗು ಅಭಿವೃದ್ಧಿ ಸಂಶೋಧನಾ ಕೇಂದ್ರ ಉಳಿಸುವಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಇಚ್ಚಾಶಕ್ತಿ ವ್ಯಕ್ತಪಡಿಸಬೇಕು ಎಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತಿರ್ಥ ಶ್ರೀಗಳು ಹೇಳಿದರು.
ಪುತ್ತೂರು ತಾಲೂಕಿನ ಬಿಳಿನೆಲೆ ಕಿದು ತೆಂಗು ಅಭಿವೃದ್ಧಿ ಸಂಶೋಧನಾ ಕೇಂದ್ರಕ್ಕೆ ಶುಕ್ರವಾರ ಸಂಜೆ ತೆರಳಿ ತೋಟಗಳ ಬೆಳೆಗಳ ವೀಕ್ಷಣೆ ನಡೆಸಿದ ಅವರು ಸ್ಥಳಿಯ ಕೃಷಿಕರಿಗೆ, ಕೇಂದ್ರದ ಸಿಬ್ಬಂದಿಗಳಿಗೆ ಧೈರ್ಯ ತುಂಬಿದರು.

ಸಂಶೋಧನಾ ಕೇಂದ್ರ ಉಳಿಸುವ ಮೂಲಕ ಕೃಷಿಕರ ಹಿತ ಕಾಪಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಎರಡು ಸರಕಾರಗಳ ಪಾತ್ರ ಸಮಾನದ್ದಾಗಿದೆ. ಪ್ರಾಮಾಣಿಕ ಪ್ರಯತ್ನಗಳು ಕೇಂದ್ರ ಮತ್ತು ರಾಜ್ಯ ಸರಕಾರ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಂದ ನಡೆಯಬೇಕು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದ ಎಲ್ಲ ಸಂಸದರು, ರಾಜ್ಯದ ಎಲ್ಲ ಶಾಸಕರಿಂದ ಹಿಡಿದು ಮುಖ್ಯಮಂತ್ರಿಗಳ ತನಕ ಈ ರಿಸರ್ಚ್ ಸೆಂಟರ್ ರಾಜ್ಯದಲ್ಲಿ ಉಳಿಸುವಲ್ಲಿ ಒಟ್ಟಾಗಿ ಕೆಲಸ ಮಾಡಬೇಕು. ಇತರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ರೈತರ ಹಿತ ಕಾಪಾಡುವಲ್ಲಿ ಜನಪ್ರತಿನಿಧಿಗಳು ಹೆಚ್ಚಿನ ಆಸಕ್ತಿ ವಹಿಸುತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಕಿದು ಕೇಂದ್ರ ಉಳಿಸಲು ಕೇಂದ್ರ ಹಾಗೂ ರಾಜ್ಯದ ಸಚಿವರು, ಸಂಸದರು, ಶಾಸಕರುಗಳನ್ನು ಭೇಟಿಯಾಗಿ ಒತ್ತಾಯಿಸಲಾಗುವುದು ಎಂದರು. ಕೃಷಿಕರು, ಕೇಂದ್ರದ ಸಿಬ್ಬಂದಿಗಳು ಆತಂಕ ಪಡುವ ಅಗತ್ಯವಿಲ್ಲ. ಶೀಘ್ರ ಸಮಸ್ಯೆ ಸುಖಾಂತ್ಯ ಕಾಣಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಷ, ಬಿಳಿನೆಲೆ ಸಹಕಾರಿ ಸಂಘದ ಅಧ್ಯಕ್ಷ ಬಾಲಕೃಷ್ಣ ವಾಲ್ತಾಜೆ, ಬಿಳಿನೆಲೆ ಗ್ರಾ.ಪಂ ಅಧ್ಯಕ್ಷೆ ಶಾರದಾ ದಿನೇಶ್, ಗ್ರಾ.ಪಂ ಸದಸ್ಯ ಸತೀಶ್ ಕಳಿಗೆ, ಕೃಷಿಕ ಗಣಪಯ್ಯ ಗೌಡ ಪುತ್ತಿಲ, ಕೇಂದ್ರದ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.