ಪುಣೆ: ಇಲ್ಲಿನ ಕೊಂಧ್ವಾ ಪ್ರದೇಶದಲ್ಲಿರುವ ವಸತಿ ಸಮುಚ್ಚಯದ 60 ಅಡಿ ಎತ್ತರದ ಗೋಡೆ ಕುಸಿದು ಬಿದ್ದಿದೆ. ಪರಿಣಾಮ ಬಿಹಾರ, ಬಂಗಾಳದ 15 ಮಂದಿ ಕೂಲಿ ಕಾರ್ಮಿಕರು ಮೃತಪಟ್ಟಿರುವ ಶಂಕೆ ಮೂಡತೊಡಗಿದೆ.
ಪುಣೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗೋಡೆ ಕುಸಿದಿದೆ. ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರಿಗಾಗಿ ಈ ಗೋಡೆ ಪಕ್ಕದಲ್ಲೇ ಗುಡಿಸಲುಗಳನ್ನು ನಿರ್ಮಿಸಿಕೊಡಲಾಗಿತ್ತು. ಮಧ್ಯರಾತ್ರಿ ರಾತ್ರಿ ಸುಮಾರು 1.45ರ ವೇಳೆ ಕಾಂಪೌಂಡ್ ಗೋಡೆ ನೆಲಕ್ಕುರುಳಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿಗಳ ಪ್ರಕಾರ 9 ಪುರುಷರು, ಓರ್ವ ಮಹಿಳೆ ಹಾಗೂ ನಾಲ್ಕು ಮಕ್ಕಳು ಸೇರಿ ಒಟ್ಟು 15 ಮಂದಿ ಸಾವಿಗೀಡಾಗಿದ್ದಾರೆ ಎಂದು ಖಚಿತಪಡಿಸಲಾಗಿದ್ದು, ಎಷ್ಟು ಮಂದಿ ಗಾಯಗೊಂಡಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಎನ್‍ಡಿಆರ್‍ಎಫ್ ತಂಡ ಸ್ಥಳಕ್ಕೆ ಧಾವಿಸಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು ಇನ್ನೂ ಇಬ್ಬರು ಮೂವರು ಸಿಲುಕಿರುವ ಸಾಧ್ಯತೆ ಇದೆ