Monday, January 20, 2025
ರಾಜಕೀಯಸುದ್ದಿ

ಗ್ರಾಮದ ಬಳಿಕ ವಿದೇಶಕ್ಕೆ ಹೆಚ್.ಡಿ.ಕೆ ಪ್ರಯಾಣ – ಕಹಳೆ ನ್ಯೂಸ್

ಗ್ರಾಮ ವಾಸದ ಬಳಿಕ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಅಮೇರಿಕಾಕ್ಕೆ ಪ್ರಯಾಣ ಬೆಳೆಸಿದ್ದಾರೆ. ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಆಹ್ವಾನದ ಮೇರೆಗೆ ಜೂನ್ 30 ರಂದು ನ್ಯೂ ಜೆರ್ಸಿಯಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದ ಶಿಲಾನ್ಯಾಸವನ್ನ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ನೆರವೇರಿಸಲಿದ್ದಾರೆ.

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ನ್ಯೂಜೆರ್ಸಿಯಲ್ಲಿ ದೇವಾಲಯ ನಿರ್ಮಿಸುತ್ತಿದ್ದಾರೆ. ಆ ದೇವಾಲಯದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ತಮ್ಮನ್ನು ಬರಲೇಬೇಕೆಂದು ಒತ್ತಾಯ ಮಾಡಿದ್ದಾರೆ. ತಮ್ಮ ಬಿಡುವಿಲ್ಲದ ಕಾರ್ಯಕ್ರಮಗಳ ಬಗ್ಗೆ ಸ್ವಾಮೀಜಿಯವರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನವನ್ನು ಮಾಡಿದ್ದೇನೆ. ಆದರೂ ಅವರು ಬರಲೇಬೇಕೆಂಬ ಒತ್ತಡ ಹೇರಿರುವ ಹಿನ್ನೆಲೆಯಲ್ಲಿ ನ್ಯೂಜೆರ್ಸಿಗೆ ಹೋಗುತ್ತಿರುವುದಾಗಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಜುಲೈ 5 ರಂದು ಒಕ್ಕಲಿಗರ ಪರಿಷತ್ ಅಮೆರಿಕಾದ ಸಮಾವೇಶದಲ್ಲಿ ಭಾಗವಹಿಸಿ ಹಿಂದಿರುಗಲಿದ್ದಾರೆ. ಸರ್ಕಾರಿ ವೆಚ್ಚದಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳುವುದಿಲ್ಲ ಎಂದು ತಿಳಿಸಿರುವ ಅವರು ಜುಲೈ ಮೊದಲ ವಾರದಲ್ಲಿ ವಾಪಸ್ ಮರಳಲಿದ್ದಾರೆ. ಇದು ಸಂಪೂರ್ಣ ಖಾಸಗಿ ಭೇಟಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು