Friday, January 24, 2025
ರಾಜಕೀಯ

ಅತೀ ಶೀಘ್ರದಲ್ಲಿ ಬಿಜೆಪಿ ಸರಕಾರ ಮತ್ತೆ ಅಧಿಕಾರಕ್ಕೆ ಬರಲ್ಲ: ಶೋಭಾ ಕರಂದ್ಲಾಜೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿನ ರಾಜಕೀಯ ವಲಯದಲ್ಲಿ ಆಗುತ್ತಿರುವ ಬಿಸಿ ಬಿಸಿ ಚರ್ಚೆ ಏನಂದ್ರೆ ಅತೀ ಶೀಘ್ರದಲ್ಲಿ ಬಿಜೆಪಿ ಸರಕಾರ ಮತ್ತೆ ಅಧಿಕಾರಕ್ಕೆ ಬರುತ್ತಾ ಎಂದು.

ಯಾಕೆಂದ್ರೆ ಈ ಪ್ರಶ್ನೆಗೆ ಕಾರಣ ನಿನ್ನೆ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಸಂಸದರ ಅಭಿನಂದನಾ ಕಾರ್ಯಕ್ರಮದಲ್ಲಿ ಯುವ ಸಂಸದ ತೇಜಸ್ವಿ ಸೂರ್ಯ ಅವರು ರಾಜ್ಯದಲ್ಲಿ ಬಿಜೆಪಿ ಸರಕಾರ ಮತ್ತೆ ಬರಲಿದೆ. ಯಡಿಯೂರಪ್ಪ ಮತ್ತೆ ಸಿ.ಎಂ ಆಗಲಿದ್ದಾರೆ ಎಂದು ಹೇಳಿದ್ದರು. ಈ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಶೋಭಾ ಕರಂದ್ಲಾಜೆ ವ್ಯತಿರಿಕ್ತವಾಗಿ ಹೇಳಿಕೆ ನೀಡಿದ್ದಾರೆ. ಜನ ವಿರೋಧಿ ಸರ್ಕಾರ ಮುಂದುವರೆಯಬೇಕು. ಕುರಿ ಕೊಬ್ಬಿದಷ್ಟು ಕಡಿಯುವವರಿಗೆ ಲಾಭವಾಗುತ್ತದೆ ಎಂದು ಬಿಜೆಪಿ ಸಂಸದೆ ಹಾಗು ರಾಜ್ಯ ಬಿಜೆಪಿ ಪ್ರಾಧಾನ ಕಾರ್ಯದರ್ಶಿ ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಬರುತ್ತದೆ ಎಂಬ ಮಾತು ನಾನು ಒಪ್ಪುವುದಿಲ್ಲ. ರಾಜ್ಯದಲ್ಲಿ ಮೈತ್ರಿ ಸರ್ಕಾರವೇ ಮುಂದುವರೆಯಲಿ. ಈ ಮೈತ್ರಿ ಸರ್ಕಾರಕ್ಕೆ ರಾಜ್ಯದ ಜನ ಬುದ್ದಿ ಕಲಿಸುತ್ತಾರೆ ಎಂದು ಹೇಳಿದ್ದಾರೆ. ಸರ್ಕಾರ ರಚನೆಯ ಯಾವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿಲ್ಲ. ಮಧ್ಯಂತರ ಚುನಾವಣೆಗೆ ನಾವು ತಯಾರಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು