Wednesday, January 22, 2025
ಸುದ್ದಿ

ವಿವೇಕಾನಂದ ಎಂ.ಸಿ.ಜೆ. ಗೆ ಶಿವರಾಮ ಪೈಲೂರು ಅವರಿಂದ ಪುಸ್ತಕ ಕೊಡುಗೆ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗಕ್ಕೆ ಜು.2ರಂದು ಹಿರಿಯ ಅಭಿವೃದ್ಧಿ ಪತ್ರಕರ್ತ ಶಿವರಾಮ ಪೈಲೂರು ಅವರು ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು. ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತಹ ಪತ್ರಿಕೋದ್ಯಮಕ್ಕೆ ಸಂಬಂಧಿಸಿದ ಸುಮಾರು ನೂರಕ್ಕೂ ಹೆಚ್ಚು ಪುಸ್ತಕಗಳನ್ನು ಅವರು ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಕಾಲೇಜಿನ ವತಿಯಿಂದ ಪ್ರಾಂಶುಪಾಲರು ಶಿವರಾಮ ಪೈಲೂರು ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

ಐಕ್ಯುಎಸಿ ಸಂಯೋಜಕ ಡಾ. ಹೆಚ್.ಜಿ. ಶ್ರೀಧರ್, ಸ್ನಾತಕೋತ್ತರ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ರಾಕೇಶ್ ಕುಮಾರ್ ಕಮ್ಮಜೆ, ಉಪನ್ಯಾಸಕಿಯರಾದ ಸುಶ್ಮಿತಾ, ರಾಧಿಕಾ, ಪ್ರಜ್ಞಾ, ಉಪನ್ಯಾಸಕ ಭರತ್‍ರಾಜ್, ವಿವೇಕಾನಂದ ಮಲ್ಟಿಮೀಡಿಯಾ ಸ್ಟುಡಿಯೋದ ತಾಂತ್ರಿಕ ಸಹಾಯಕ ಸಂತೋಷ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು