Wednesday, January 22, 2025
ಸುದ್ದಿ

ಮುಂಬೈನಲ್ಲಿ ಕಾಂಪೌಂಡ್ ಕುಸಿತ – ಕಹಳೆ ನ್ಯೂಸ್

ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿ ಭಾರೀ ಮಳೆಗೆ ಅಪಾರ್ಟ್‍ಮೆಂಟ್‍ನ ಕಾಂಪೌಂಡ್ ಕುಸಿದು 15 ಕೂಲಿ ಕಾರ್ಮಿಕರು ಪ್ರಾಣ ಕಳೆದುಕೊಂಡ ಘಟನೆ ನಡೆದ ಬೆನ್ನಲ್ಲೇ, ಮುಂಬೈನಲ್ಲಿ ಮತ್ತೆ ಇದೇ ರೀತಿಯ ಒಂದು ಪ್ರಕರಣ ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಂಬೈನ ಪೂರ್ವ ಮಲಾಡ ಭಾಗದ ಪಿಂಪ್ರಿಪಾಡದಲ್ಲಿ ಕಟ್ಟಡದ ಗೋಡೆಯೊಂದು ಕುಸಿದು 18 ಮಂದಿ ಮೃತಪಟ್ಟಿದ್ದು, 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದ ಅವಶೇಷಗಳಡಿ ಇನ್ನಷ್ಟು ಜನರು ಸಿಲುಕಿಕೊಂಡಿರುವ ಸಾಧ್ಯತೆಯಿದ್ದು, ಎನ್‍ಡಿಆರ್‍ಎಫ್ ಹಾಗೂ ಇತರೆ ತಂಡದಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಂಬೈ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚುತ್ತಿರುವುದು ಇಂತಹ ಘಟನೆಗಳಿಗೆ ಕಾರಣವಾಗಿದೆ.