Recent Posts

Tuesday, January 21, 2025
ರಾಜಕೀಯ

ಬಿಜೆಪಿ ಯಾವುದೇ ಆಪರೇಷನ್ ಕಮಲ ಮಾಡುತ್ತಿಲ್ಲ: ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿಕೆ – ಕಹಳೆ ನ್ಯೂಸ್

ಶಿವಮೊಗ್ಗ: ಕೇವಲ ಕಾಂಗ್ರೆಸ್ ಮಾತ್ರವಲ್ಲ, ಜೆಡಿಎಸ್ ಶಾಸಕರು ಕೂಡ ರಾಜಿನಾಮೆ ಕೊಡಲಿದ್ದಾರೆ ಎಂದು ಹಿರಿಯ ಬಿಜೆಪಿ ಮುಖಂಡ ಮತ್ತು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಅವರು ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ, ಬಿಜೆಪಿ ಯಾವುದೇ ಆಪರೇಷನ್ ಕಮಲ ಮಾಡುತ್ತಿಲ್ಲ, ಶಾಸಕರ ರಾಜಿನಾಮೆಯಿಂದಲೇ ಸರ್ಕಾರ ಪತನವಾಗುತ್ತದೆ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಳ್ಳಾರಿಯಲ್ಲಿ ಇರುವ 3,367 ಎಕರೆ ಭೂಮಿಯನ್ನು ಸರ್ಕಾರ ಜಿಂದಾಲ್ ಸಂಸ್ಥೆಗೆ ಮಾರಿದ್ದನ್ನು ವಿರೋಧಿಸಿ ಆನಂದ್ ಸಿಂಗ್ ರಾಜಿನಾಮೆ ನೀಡಿದ್ದಾರೆ. ಭೂಮಿಯ ಮೂಲ ಬೆಲೆ 3 ಸಾವಿರ ಕೋಟಿ ಇದೆ, ಆದರೆ ಸರ್ಕಾರ ಕೇವಲ 30 ಕೋಟಿಗೆ ಮಾರಾಟ ಮಾಡಿದೆ ಎಂದು ಆರೋಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ವಾಭಿಮಾನವುಳ್ಳ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಇದನ್ನು ವಿರೋಧಿಸಿ ರಾಜಿನಾಮೆ ನೀಡಿದ್ದಾರೆ ಎಂದು ಹೇಳಿದ್ದಾರೆ.