ನವದೆಹಲಿ: ಮಂಡ್ಯ ರಣಕಣದಲ್ಲಿ ಗೆದ್ದು ಬಂದ ಸುಮಲತಾ ಅಂಬರೀಷ್ ಸಂಸತ್‍ನಲ್ಲಿ ಕನ್ನಡದಲ್ಲಿ ಮಾತನ್ನು ಆರಂಭಿಸಿದ್ದಾರೆ. ಮೊದಲ ಬಾರಿಗೆ ಮಾತನಾಡಿದ ಸಂಸದೆ ಸುಮಲತಾ ನನ್ನ ಹೆಮ್ಮೆಯ ಕ್ಷೇತ್ರವಾದ ಮಂಡ್ಯದ ಸ್ವಾಭಿಮಾನಿ ಜನತೆಗೆ ಧನ್ಯವಾದಗಳು ಎಂದು ಮಂಡ್ಯದ ಜನತೆಗೆ ಕನ್ನಡದಲ್ಲಿ ಶುಭಾಶಯ ಕೋರಿದ್ದಾರೆ. ನಂತರ ಇಂಗ್ಲಿಷ್‍ನಲ್ಲಿ ಮಾತನ್ನಾಡಿದ್ದಾರೆ.
ಇದೇ ವೇಳೆ ಅವರು ಮಾನ್ಸೂನ್ ಮಳೆ ನಿಗದಿತ ಪ್ರಮಾಣದಲ್ಲಿ ಬಂದಿಲ್ಲ. ಅಲ್ಲದೆ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕಬ್ಬು ಹಾಗೂ ಭತ್ತ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದರು.
ಪ್ರಧಾನಿ ಮೋದಿ ಹಾಗೂ ಜಲಶಕ್ತಿ ಸಚಿವರು ಈ ಬಗ್ಗೆ ತುರ್ತುಗಮನ ಕೊಡಬೇಕು. ಬರ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರ್ಕಾರ ಮುಂದಾಗಬೇಕಿದೆ. ಎಲ್ಲರೂ ಸೇರಿ ಸಮಸ್ಯೆ ಬಗೆಹರಿಸಬೇಕಿದೆ ಎಂದು ಸುಮಲತಾ ಮನವಿ ಮಾಡಿಕೊಂಡರು.
ಇನ್ನು ತಮ್ಮ ಮಾತಿನ ಕೊನೆಯಲ್ಲಿ ಜೈ ಜವಾನ್, ಜೈ ಕಿಸಾನ್, ಜೈ ಹಿಂದ್, ಜೈ ಕರ್ನಾಟಕ ಎಂದು ಘೋಷಣೆ ಮಾಡುವ ಮೂಲಕ ತಮ್ಮ ಮಾತನ್ನು ಕೊನೆಗೊಳಿಸಿದರು.