Wednesday, January 22, 2025
ಸುದ್ದಿ

ಉದ್ಯಾವರ ಬಲಾಯಿಪಾದೆ ಜಂಕ್ಷನ್ ಬಳಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ – ಕಹಳೆ ನ್ಯೂಸ್

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಒಂದು ಬುಧವಾರ ಬೆಳಗ್ಗಿನ ಜಾವ ಉರುಳಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರ ಬಲಾಯಿಪಾದೆ ಜಂಕ್ಷನ್ ಬಳಿ  ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉಡುಪಿಯಿಂದ – ಮಂಗಳೂರು ಕಡೆಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಉಡುಪಿ ಮಂಗಳೂರು ಕಡೆ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದು, ಸ್ಥಳದಲ್ಲಿ ಅಗ್ನಿಶಾಮಕ ದಳವನ್ನು ಸನ್ನದ್ದವಾಗಿರಿಸಿದೆ.