Wednesday, January 22, 2025
ಸುದ್ದಿ

ರಾಜ್ಯಕ್ಕೆ 1 ಸಾವಿರ ಮೆಡಿಕಲ್ ಸೀಟುಗಳ ಹೆಚ್ಚಳ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಹದಿನೆಂಟು ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಒಂದು ಸಾವಿರ ಎಂಬಿಬಿಎಸ್ ಸೀಟುಗಳು ಹೆಚ್ಚುವರಿ ಪ್ರವೇಶಕ್ಕಾಗಿ ಲಭ್ಯವಾಗಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಸ್ತುತ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ನಾಲ್ಕು ಸಾವಿರ ಸೀಟುಗಳಿದ್ದು ಇದೀಗ ಒಂದು ಸಾವಿರ ಹೆಚ್ಚುವರಿ ಮಾಡಿರುವುದರಿಂದ ನೀಟ್ ಪದ್ಧತಿಯಡಿ 500 ಸೀಟುಗಳು ರಾಜ್ಯದ ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ ಲಭ್ಯವಾಗಲಿದೆ.
ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸೀಟುಗಳ ಸಂಖ್ಯೆಯೂ ಶೇ.10ರಿಂದ 15ರಷ್ಟು ಹೆಚ್ಚಳವಾಗಲಿದೆ. ಹೈದರಾಬಾದ್ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಹಿನ್ನೆಲೆಯಲ್ಲಿ ಲಭ್ಯವಾದ ಸೀಟುಗಳು ಇದರಲ್ಲಿ ಸೇರಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇತ್ತೀಚೆಗೆ ಕರ್ನಾಟಕದ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿದ್ದ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ (ಎಂಸಿಐ) ತಂಡ ಮೂಲಸೌಕರ್ಯಗಳ ಬಗ್ಗೆ ತೃಪ್ತಿವ್ಯಕ್ತಪಡಿಸಿ ನೀಡಿದ ವರದಿ ಆಧಾರದ ಮೇಲೆ ಹೆಚ್ಚುವರಿ 1 ಸಾವಿರ ಸೀಟುಗಳ ಪ್ರವೇಶಕ್ಕೆ ಅವಕಾಶ ದೊರೆತಿದೆ.