Tuesday, January 21, 2025
ಸುದ್ದಿ

ಕಣ್ಣೂರು ಬಳಿಯ ಅಕ್ರಮ ಕಸಾಯಿಖಾನೆಗೆ ದಾಳಿ; ಪೊಲೀಸರಿಂದ ಖಡಕ್ ಎಚ್ಚರಿಕೆ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನ ಕಣ್ಣೂರು ಎಂಬಲ್ಲಿ ಜಾನುವಾರುಗಳನ್ನು ತಮ್ಮ ಮನೆಯಲ್ಲಿ ಅಕ್ರಮವಾಗಿ ಹೊಂದಿದ್ದ ಕಸಾಯಿಖಾನೆಯಲ್ಲಿ ವಧೆ ಮಾಡಿ ಮಾಂಸವನ್ನು ಮಾರಾಟ ಮಾಡುತ್ತಿದ್ದಾರೆ ಎಂಬುದಾಗಿ ಸಿಸಿಬಿ ಘಟಕದ ಸಿಬ್ಬಂದಿ ನೀಡಿದ ಖಚಿತ ಮಾಹಿತಿಯ ಅನ್ವಯ ಕಂಕನಾಡಿ ಪೊಲೀಸ್ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪಿಗಳು ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಮೂರು ಜಾನುವಾರುಗಳ ಚರ್ಮ, ದನದ ಮಾಂಸ, ತ್ಯಾಜ ವಸ್ತುಗಳು ಹಾಗೂ ಪರಿಕರಗಳನ್ನು ಪಂಚರ ಸಮಕ್ಷಮ ಮಹಜರು ಮೂಲಕ ಸ್ವಾಧೀನ ಪಡಿಸಲಾಗಿದೆ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು