ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಪುತ್ತೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಅಪರಾಧಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಪುತೂರು, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರವನ್ನು ಬರೆದಿದ್ದಾರೆ.
ಯಾಕೆಂದರೆ ಈ ಅತ್ಯಾಚಾರ ಪ್ರಕರಣವನ್ನು ಮುಂದಿಟ್ಟುಕೊಂಡು ಕೆಲವು ಕಿಡಿಗೇಡಿಗಳು, ವೀ ವೀಡಿಯೋದಲ್ಲಿರುವ ಆರೋಪಿಗಳು ಎಬಿವಿಪಿ ಕಾರ್ಯಕರ್ತರು ಎಂಬ ಅಪಪ್ರಚಾರ ಮಾಡುತ್ತಿದ್ದಾರೆ ಎಂಬುದು, ಎಬಿವಿಪಿ ಪುತ್ತೂರು ಮಾಡುತ್ತಿರುವ ಆರೋಪ.
ಆರೋಪಿಗಳಿಗೂ ಎಬಿವಿಪಿಗೂ ಯಾವುದೇ ಸಂಬಂಧವಿರುವುದಿಲ್ಲ. ಹಾಗೂ ಆ ಆರೋಪಿಗಳು ಇವರ ಸಂಘಟನೆಯ ಸದಸ್ಯರೂ ಕೂಡ ಅಲ್ಲ ಎಂದು ಸ್ಪಷ್ಟೀಕರಿಸುತ್ತಾರೆ ಎಬಿವಿಪಿ ಪುತ್ತೂರಿನ ನಗರ ಕಾರ್ಯದರ್ಶಿ ಶಿವಪ್ರಸಾದ್ ಕೆ.ಪಿ.
ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಿದು ಬಿಡುವ ಕಿಡಿಗೇಡಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು ಮತ್ತು ಆ ಜಾಲತಾಣಗಳ ಖಾತೆಗಳನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂಬುದು ಇವರು ಮಾಡುತಿರುವ ಮನವಿ.