Recent Posts

Thursday, November 28, 2024
ಸುದ್ದಿ

ಇನ್ಮುಂದೆ ಸ್ಥಳೀಯ ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ, ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ – ಕಹಳೆ ನ್ಯೂಸ್

ದೆಹಲಿ: ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್(ಐಬಿಪಿಎಸ್) ನಡೆಸುವ ಐಬಿಪಿಎಸ್, ಆರ್‍ಆರ್‍ಬಿ ಬ್ಯಾಂಕಿಂಗ್ ಪರೀಕ್ಷೆ ಇನ್ಮುಂದೆ ಕನ್ನಡ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲಿ ಪರೀಕ್ಷೆ ಬರೆಯಬಹುದಾಗಿದೆ.

ಈ ಬಗ್ಗೆ ಸಂಸತ್ತಿನಲ್ಲಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ರಾಜ್ಯಸಭಾ ಸದಸ್ಯ ಜಿಸಿ ಚಂದ್ರಶೇಖರ್ ಅವರು ಸೇರಿದಂತೆ ಅನೇಕ ಮಂದಿ ಸಂಸದರು ಸಂಸತ್ತಿನ ಕಲಾಪದ ಶೂನ್ಯ ಅವಧಿಯಲ್ಲಿ ಈ ಬಗ್ಗೆ ತಮ್ಮ ಗಮನ ಸೆಳೆದಿದ್ದರು. ಈ ಬಗ್ಗೆ ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಇನ್ಮುಂದೆ ಸ್ಥಳೀಯ ಭಾಷೆಗಳಲ್ಲಿ ಇನ್ಸ್‍ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್(ಐಬಿಪಿಎಸ್) ನಡೆಸುವ ಐಬಿಪಿಎಸ್ ಆರ್‍ಆರ್‍ಬಿ ಪರೀಕ್ಷೆಯನ್ನು ಬರೆಯಲು ಅವಕಾಶ ನೀಡಲಾಗುವುದು ಅಂತ ಅವರು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇದೇ ವೇಳೆ ಅವರು ಸದನಲ್ಲಿ ತಮ್ಮ ಮಾತನ್ನು ಮುಂದುವರೆಸುತ್ತ ಸ್ಥಳೀಯ ಭಾಷೆಯನ್ನು ಕಲಿಯುವುದರಿಂದ ನೌಕರರ ಕೆಲಸದಲ್ಲಿ ಇನಷ್ಟು ಪ್ರಗತಿಯನ್ನು ಕಾಣಬಹುದಾಗಿದೆ ಅಂತ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಳೀಯ ಭಾಷೆಗಳಾದ ಅಸ್ಸಾಮೀಸ್, ಬಂಗಾಳಿ, ಗುಜರಾತಿ, ಕನ್ನಡ, ಕೊಂಕಣಿ, ಮಲಯಾಳಂ, ಮಣಿಪುರಿ, ಮರಾಠಿ, ಒಡಿಯಾ, ಪಂಜಾಬಿ, ಉರ್ದು, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಐಬಿಪಿಎಸ್ ಪರೀಕ್ಷೆ ಬರೆಯಬಹುದಾಗಿದೆ.