Recent Posts

Tuesday, January 21, 2025
ಸುದ್ದಿ

ಮಸ್ಕತ್ ಪೊಲೀಸರಿಂದ ಬಂಧಿತವಾಗಿರುವ ಪ್ರಕಾಶ್ ಪೂಜಾರಿಯನ್ನು ಭಾರತಕ್ಕೆ ಕರೆತರುವಂತೆ ವಿದೇಶಾಂಗ ಖಾತೆ ಸಚಿವರಿಗೆ ಮನವಿ – ಕಹಳೆ ನ್ಯೂಸ್

ಸಂಸದ ನಳಿನ್ ಕುಮಾರ್ ಕಟೀಲ್ ಮಾನ್ಯ ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ಮುರಳೀಧರನ್ ಅವರನ್ನು ಭೇಟಿ ಮಾಡಿದರು. ಭೇಟಿ ಮಾಡಿ ಕೆಲ ದಿನಗಳ ಹಿಂದೆ ಮಸ್ಕತ್ ಪೊಲೀಸರಿಂದ ಬಂಧಿತವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಾಶಿಪಟ್ನ ನಿವಾಸಿ ಪ್ರಕಾಶ್ ಪೂಜಾರಿ ಇವರನ್ನು ಭಾರತಕ್ಕೆ ಕರೆತರುವ ವಿಚಾರವಾಗಿ ಮಧ್ಯಪ್ರವೇಶಿಸಲು ಮಸ್ಕತ್‍ನ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸಂಸದರು ಸಚಿವರನ್ನು ವಿನಂತಿಸಿದರು.

ಈ ವಿಚಾರವಾಗಿ ವಿದೇಶಾಂಗ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಚಿವರು ಕಾನೂನು ತೊಡಕು ನಿವಾರಣೆಯಾದ ತಕ್ಷಣ ಅವರನ್ನು ಸ್ವದೇಶಕ್ಕೆ ಕರೆತರುವ ಭರವಸೆ ನೀಡಿದರು

ಜಾಹೀರಾತು
ಜಾಹೀರಾತು
ಜಾಹೀರಾತು

ಇದಲ್ಲದೇ ಉದ್ಯೋಗಕ್ಕೆಂದು ಕುವೈಟ್‍ಗೆ ತೆರಳಿ ಸಿಲುಕಿಕೊಂಡಿರುವ 73 ಭಾರತೀಯರ ಪೈಕಿ ಸ್ವದೇಶಕ್ಕೆ ಮರಳಲಿಚ್ಚಿಸಿರುವ 13 ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ಸಲುವಾಗಿ ಹಣಕಾಸಿನ ತೊಡಕಿನಲ್ಲಿರುವ ಇವರಿಗೆ ವಿಮಾನ ಟಿಕೆಟ್ ನ ವ್ಯವಸ್ಥೆ ಮಾಡಿಸಿಕೊಡಲು ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸಚಿವರನ್ನು ವಿನಂತಿಸಿದರು. ವಿಮಾನ ಟಿಕೆಟ್ ನ ವ್ಯವಸ್ಥೆ ಮಾಡಿಸಿಕೊಡುವ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಪರಿಶೀಲಿಸಲಾಗುವುದು ಎಂದು ಸಚಿವರು ತಿಳಿಸಿದರು

ಜಾಹೀರಾತು
ಜಾಹೀರಾತು
ಜಾಹೀರಾತು