Thursday, January 23, 2025
ಸುದ್ದಿ

ಮಹಿಳೆಯರ ಶ್ರೇಯಾಭಿವೃದ್ಧಿಗಾಗಿ ನಾರಿ ತು ನಾರಾಯಣಿ ಯೋಜನೆ ಘೋಷಿಸಿದ ನಿರ್ಮಲಾ ಸೀತಾರಾಮನ್ – ಕಹಳೆ ನ್ಯೂಸ್

ನವದೆಹಲಿ : ನಾರಿ ತು ನಾರಾಯಣಿ ಯೋಜನೆಗೆ ಹಲವು ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ. ಜೊತೆಗೆ ಮಹಿಳೆಯರ ರಕ್ಷಣೆ ಕುರಿತು ಹಲವರು ಪ್ರಶ್ನೆ ಎತ್ತಿದ್ದಾರೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಭಾಷಣದಲ್ಲಿ ಭಾರತದ ರಾಜಕೀಯದಲ್ಲಿ ಮಹಿಳೆಯ ಪಾತ್ರದ ಬಗ್ಗೆ ವಿವರಿಸಲು ಸ್ವಾಮಿ ವಿವೇಕಾನಂದ ಹೇಳಿಕೆಯನ್ನು ಉಲ್ಲೇಖಿಸಿದರು. ಒಂದು ರೆಕ್ಕೆ ಇರುವ ಹಕ್ಕಿ ಹಾರಲು ಸಾಧ್ಯವಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದೇಶದ ಎಲ್ಲ ಪ್ರಕ್ರಿಯೆಗಳಲ್ಲೂ ಮಹಿಳೆಯರು ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ದೇಶದಲ್ಲಿ ಗ್ರಾಮೀಣ ಪ್ರದೇಶ ಅಭಿವೃದ್ಧಿಯಾದರೆ ಮಹಿಳೆಯರ ಪಾಲ್ಗೊಳ್ಳುವಿಕೆಯೂ ಹೆಚ್ಚಾಗುತ್ತದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ಕೇಂದ್ರ ಸರ್ಕಾರ ‘ನಾರಿ ತು ನಾರಾಯಣಿ’ ಎಂಬ ಯೋಜನೆ ಜಾರಿಗೊಳಿಸಿದೆ. ಮಹಿಳೆಯರಿಗಾಗಿ ಎಸ್‍ಎಫ್‍ಜಿ ಯೋಜನೆ ವಿಸ್ತರಣೆ ಮತ್ತು ಒಂದು ಲಕ್ಷ ಸಾಲ ಒದಗಿಸಲಾಗುತ್ತದೆ ಎಂದು ತಿಳಿಸಿದರು. ಕಳೆದೊಂದು ದಶಕದಿಂದ ಮಹಿಳೆಯರ ಪಾಲ್ಗೊಳ್ಳುವಿಕೆ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಇದೇ ಸದನದಲ್ಲಿ 78 ಮಹಿಳೆಯರಿದ್ದಾರೆ ಎಂದು ಹೇಳಿದರು.